ಕೊರೊನಾ ಆತಂಕದಿಂದಾಗಿ ಲಾಕ್ ಡೌನ್ ಬಳಿಕವೂ ಹೊರ ರಾಜ್ಯಗಳಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿರಲಿಲ್ಲ. ಇದೀಗ ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪುನರ್ ಆರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
![]()
ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಈಗಾಗಲೇ ಆಂಧ್ರ ಪ್ರದೇಶಕ್ಕೆ ಸಾರಿಗೆ ಸಂಸ್ಥೆ ಬಸ್ ಗಳು ಕಾರ್ಯಾಚರಣೆ ಮಾಡುತ್ತಿವೆ. ಉಳಿದ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಅಲ್ಲಿನ ಸರ್ಕಾರಗಳ ಅನುಮತಿ ಸಿಗಬೇಕಿದೆ. ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ಪತ್ರ ಬರೆಯಲಾಗಿದೆ. ಶೀಘ್ರವೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.









