ಹೊಸ ಸಂಸತ್ ಭವನಕ್ಕೆ ಶಿಲಾನ್ಯಾಸ: ಸುಬ್ರಮಣಿಯನ್ ಸ್ಟಾಮಿ ವ್ಯಂಗ್ಯ
ನವದೆಹಲಿ : ಪೆಟ್ರೋಲ್ ಡಿಸೇಲ್ ದರ ಏರಿಕೆ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ಹೊಸ ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ಟಿಟ್ಟರ್ ಕಾರ್ಟೂನ್ ಹಂಚಿಕೊಂಡು ವ್ಯಂಗ್ಯವಾಡಿದ್ದಾರೆ.
ಟ್ವಿಟ್ಟರ್ ನಲ್ಲಿ ಸುಬ್ರಮಣಿಯನ್ ಸ್ವಾಮಿ ಪೆಟ್ರೋಲ್ ಬೆಲೆ ಏರಿಕೆ ಮತ್ತು ಸಂಸತ್ ಭವನ ಉದ್ಘಾಟನೆಯ ಸಂಬಂಧದ ಕಾರ್ಟೂನ್ ಹಂಚಿಕೊಂಡಿದ್ದಾರೆ.
ಅದರಲ್ಲಿ ವ್ಯಕ್ತಿಯೊಬ್ಬರು ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರಧಾನಿಗಳ ಮುಂದೆ ನಿಂತ ಅಧಿಕಾರಿ ಟ್ಯಾಕ್ಸ್ ಇಲ್ಲದೇ ದೇಶ ಹೇಗೆ ನಡೆಸೋದು ಎಂದು ಪ್ರಶ್ನಿಸಿದ್ದಾರೆ.
ಸಗಣಿ ಎತ್ತಿದ್ದರಿಂದ ಏನೂ ಆಗೋದಿಲ್ಲ, ಆರಾಧನೆ ಮಾಡಬೇಕು
ಮತ್ತೊಂದು ಕಾರ್ಟೂನ್ ನಲ್ಲಿ ಸರ್ಕಾರಕ್ಕೆ ಹಣದ ಕೊರತೆ ಇದ್ರೆ ಹೊಸ ಸಂಸತ್ ಭವನ ಮಾಡ್ತಿರೋದು ಯಾಕೆ ಎಂದು ವ್ಯಕ್ತಿ ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಅಧಿಕಾರಿ ಇದು ಅಭಿವ್ಯಕ್ತಿಯ ಸ್ವಾತಂತ್ರ್ಯದ ಪರಮಾವಧಿ ಎಂದಿದ್ದಾರೆ.
ಅಂದಹಾಗೆ ಎರಡು ದಿನಗಳ ಹಿಂದೆ ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ವಿಚಾರವಾಗಿ ಸುಬ್ರಮಣಿಯನ್ ಸ್ವಾಮಿ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel