ಪಶ್ಚಿಮ ಬಂಗಾಳ- ಶುಕ್ರವಾರ ಅತಿ ಹೆಚ್ಚು ಹೊಸ ಕೋವಿಡ್-19 ಪ್ರಕರಣ ಪತ್ತೆ
ಕೊಲ್ಕತ್ತಾ, ಜುಲೈ18: ಪಶ್ಚಿಮ ಬಂಗಾಳದಲ್ಲಿ ಶುಕ್ರವಾರ 1,894 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದೆ. ರಾಜ್ಯವು ಒಂದೇ ದಿನದಲ್ಲಿ 13,240 ಮಾದರಿಗಳನ್ನು ಪರೀಕ್ಷಿಸಿದ್ದು, ಅದರಲ್ಲಿ 1894 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದು ಇದುವರೆಗೆ ಒಂದೇ ದಿನದಲ್ಲಿ ಪತ್ತೆಯಾದ ಅತಿ ಹೆಚ್ಚು ಕೊರೊನಾ ಪ್ರಕರಣಗಳಾಗಿವೆ.
ಸೌಮ್ಯ ಮತ್ತು ರೋಗಲಕ್ಷಣಗಳಿಲ್ಲದ ರೋಗಿಗಳನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದ್ದರೆ ಮತ್ತು ಜ್ವರವಿಲ್ಲದ ಮತ್ತು ಸ್ಥಿರವಾಗಿರುವ ರೋಗಿಗಳನ್ನು ಐಸಿಎಂಆರ್ ಮಾರ್ಗಸೂಚಿಗಳನ್ನು ಅನುಸರಿಸಿ ಹೋಂ ಕ್ವಾರಂಟೈನ್ ಗಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ.

ಆದಾಗ್ಯೂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳವು ಹಲವಾರು ರಾಜ್ಯಗಳಿಗಿಂತ ಕೊರೊನಾ ಸೋಂಕು ನಿಯಂತ್ರಣದಲ್ಲಿ ಉತ್ತಮ ಸ್ಥಾನದಲ್ಲಿದೆ . ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಸರ್ಕಾರ ದೇವರಲ್ಲ. ಬಂಗಾಳ ಸರ್ಕಾರವು ಮ್ಯಾಜಿಕ್ ಮಾಡಲು ಸಾಧ್ಯವಿಲ್ಲ. ಆದರೆ ಉಚಿತ ಪಡಿತರ, ವಿದ್ಯಾರ್ಥಿವೇತನ ಹಣ, ಪಿಂಚಣಿ ಗಳನ್ನು ನೀಡಲು ಶ್ರಮಿಸುತ್ತಿದೆ. ನಾವು ಇನ್ನೂ ಎಷ್ಟು ಮಾಡಬಹುದು? ನಮಗೆ ಸಹಕಾರ ಬೇಕು ಎಂದು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ, ಕೋಲ್ಕತ್ತಾದಲ್ಲಿ ಮಾತ್ರ 563 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ಪ್ರಕರಣಗಳಾಗಿದೆ. ಕೋಲ್ಕತ್ತಾದಲ್ಲಿ ಇಲ್ಲಿಯವರೆಗೆ 4,772 ಸಕ್ರಿಯ ಕೋವಿಡ್-19 ಪ್ರಕರಣಗಳು ದಾಖಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಕೋವಿಡ್‌ನಿಂದಾಗಿ ಒಟ್ಟು 1,049 ಸಾವುಗಳು ವರದಿಯಾಗಿದೆ. ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಜುಲೈ 19 ರವರೆಗೆ ನಿಗದಿಪಡಿಸಿದ ಕಂಟೋನ್ಮೆಂಟ್ ವಲಯಗಳ ಲಾಕ್‌ಡೌನ್ ಅನ್ನು ವಿಸ್ತರಿಸಿದೆ.








