ಬೆಂಗಳೂರಿನ ಟ್ರಸ್ಟ್ ವೆಲ್ ಆಸ್ಪತ್ರೆಯ ವೈದ್ಯರಿಂದ ಬ್ಲಾಕ್ ಫಂಗಸ್ ಸೋಂಕಿನ ಬಗ್ಗೆ ಮಾಹಿತಿ
ಕೊರೋನಾ ಎರಡನೇ ಅಲೆಯ ಸೋಂಕಿನಿಂದ ಚೇತರಿಸಿಕೊಂಡಿರುವವರ ಮೇಲೆ ಡೆಡ್ಲಿ ಬ್ಲಾಕ್ ಫಂಗಸ್ – ಮ್ಯುಕೋರ್ಮಯೋಸಿಸ್ ಅಟ್ಯಾಕ್ ಆಗುತ್ತಿರುವ ಪ್ರಕರಣಗಳು ವರದಿಯಾಗಿದೆ. ದೆಹಲಿಯಲ್ಲಿ ಹೆಚ್ಚಾಗಿ ಕಂಡುಬಂದಿದ್ದ ಈ ಫಂಗಸ್ ಸೋಂಕು ಇದೀಗ ಬೆಂಗಳೂರಿನಲ್ಲೂ ತನ್ನ ಪ್ರಭಾವ ತೋರಿಸುತ್ತಿದೆ.
ಬೆಂಗಳೂರಿನಲ್ಲಿರುವ ಟ್ರಸ್ಟ್ ವೆಲ್ ಆಸ್ಪತ್ರೆ ಕಳೆದ 2 ವಾರಗಳಲ್ಲಿ ಬ್ಲಾಕ್ ಫಂಗಸ್ ನ ಸೋಂಕಿಗೆ ಒಳಗಾದ 38 ಜನರಿಗೆ ಚಿಕಿತ್ಸೆಯನ್ನು ನೀಡಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಇಷ್ಟೊಂದು ಪ್ರಮಾಣದಲ್ಲಿ ಬ್ಲಾಕ್ ಫಂಗಸ್ ನ ರೋಗಿಗಳಿಗೆ ಚಿಕಿತ್ಸೆ ನೀಡಿರುವುದು ಬಹುಶಃ ಇದು ಒಂದೇ ಆಸ್ಪತ್ರೆ ಎಂದರೆ ತಪ್ಪಾಗಲಾರದು.
ಕೊರೋನಾ ಸೋಂಕಿನಿಂದ ಗುಣಮುಖರಾದ ಮಧುಮೇಹ ರೋಗಿಗಳಲ್ಲಿ ಹೆಚ್ಚಾಗಿ ಈ ಫಂಗಲ್ ಸೋಂಕು ಕಂಡುಬರುತ್ತದೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಇದ್ದರೆ ಕಣ್ಣು, ಮೇಲ್ಡವಡೆಗೆ ಹಾನಿಯಾಗುವ ಸಂಭವವಿದ್ದು, ಕೆಲವೊಮ್ಮೆ ಸಾವು ಕೂಡ ಸಂಭವಿಸಬಹುದು.
ಕೊರೋನಾ ಸೋಂಕಿತರಿಗೆ ಸ್ಟಿರಾಯ್ಡ್ ಅನ್ನು ಚಿಕಿತ್ಸೆಗೆ ಬಳಸುತ್ತಿದ್ದು, ಇದು ಸೋಂಕಿತರ ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಮಧುಮೇಹ ರೋಗಿಗಳಲ್ಲಿ ಸ್ಟಿರಾಯ್ಡ್ ಬಳಕೆಯಿಂದ ಸಕ್ಕರೆ ಅಂಶವು ಏರಿಕೆ ಕಂಡು ಫಂಗಲ್ ಬೆಳವಣಿಗೆಗೆ ಕಾರಣವಾಗುತ್ತದೆ.
ಸ್ಟಿರಾಯ್ಡ್ ಜೊತೆಗೆ ಹೆಚ್ಚು ಪ್ರಭಾವದ ಆಂಟಿಬಯಾಟಿಕ್ಗಳನ್ನು ಕೆಲವು ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸಲಾಗುತ್ತದೆ. ಇದರಿಂದಾಗಿ ರೋಗನಿರೋಧಕ ಶಕ್ತಿಯು ಕಡಿಮೆಯಾಗಿ ಬ್ಲಾಕ್ ಫಂಗಸ್ ಅಥವಾ ಮ್ಯುಕೋರ್ಮಯೋಸಿಸ್ ಫಂಗಸ್ ಗೆ ತುತ್ತಾಗುವ ಸಂಭವವಿದೆ.
ಟ್ರಸ್ಟ್ ವೆಲ್ ಆಸ್ಪತ್ರೆ ಸೋಂಕಿತರಿಗೆ ವಿಶೇಷ ಕಾಳಜಿಯನ್ನು ಹಾಗೂ ಆರೈಕೆಯನ್ನು ನೀಡುವ ಉದ್ದೇಶದಿಂದ ವಿಶೇಷ ವಿಭಾಗವನ್ನು ಪ್ರಾರಂಭಿಸಿದೆ.

ಟ್ರಸ್ಟ್ ವೆಲ್ ಆಸ್ಪತ್ರೆಯ ಮ್ಯುಕೋರ್ಮಯೋಸಿಸ್ ವಿಶೇಷ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿರುವ ಡಾ. ದೀಪಕ್ ಹಲ್ದೀಪುರ್ ಮಾತನಾಡಿ, ಕೋವಿಡ್ ಸಾಂಕ್ರಾಮಿಕವು ರೋಗಿಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಕುಂದಿಸುತ್ತದೆ. ಸ್ಟಿರಾಯ್ಡ್ಗಳನ್ನು ವೈದ್ಯರ ಸಲಹೆ ಇಲ್ಲದೆ ತಪ್ಪಾಗಿ ಬಳಸುವುದರಿಂದ ಮಧುಮೇಹ ರೋಗಿಗಳಲ್ಲಿ ಸಕ್ಕರೆ ಅಂಶವು ಹೆಚ್ಚಾಗುವ ಸಂಭವವಿದೆ. ಅಲ್ಲದೆ, ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವ ಸಂಧರ್ಭದಲ್ಲಿ ಈ ಫಂಗಸ್ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತದೆ. ಆಕ್ಸಿಜನ್ ಹ್ಯೂಮಿಡಿಫೈರ್ ನಲ್ಲಿ ಬಳಸುವ ನೀರನ್ನು ಸ್ಟೆರಲೈಸ್ ಮಾಡದೇ ಇದ್ದಾಗ ಕೂಡ ಈ ಫಂಗಸ್ ಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಕೋವಿಡ್ ಸೋಂಕಿನಿಂದ ಗುಣುಮುಖರಾದ ಮೇಲೆ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಡಾ. ದೀಪಕ್ ಹಲ್ದೀಪುರ್ ಸಲಹೆ ನೀಡಿದ್ದಾರೆ.
1. ಮುಖದ ಒಂದೇ ಭಾಗದಲ್ಲಿ ನೋವು ಕಂಡುಬಂದರೆ
2. ಕಣ್ಣುಗಳಲ್ಲಿ ಊತ/ನೋವು ಕಂಡುಬಂದರೆ
3. ಮೂಗಿನಲ್ಲಿ ಗಾಳಿಯಾಡದಿರುವಿಕೆ
4. ಮೂಗಿನಲ್ಲಿ ರಕ್ತ ಸೋರಿಕೆ
5. ಹಲ್ಲುಗಳು ಸಡಿಲಗೊಳ್ಳುವುದು
6. ಬಾಯಿಯ ಮೇಲ್ಭಾಗದಲ್ಲಿ ಕಪ್ಪು ಅಥವಾ ಕಂದುಬಣ್ಣದ ಕಂಡುಬಂದರೆ
7. ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಕಂಡುಬಂದರೆ
ಇಂತಹ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಬ್ಯಾಕ್ ಫಂಗಸ್ ಅಥವಾ ಮ್ಯುಕೋರ್ಮಯೋಸಿಸ್ ನ ಸೋಂಕು ಇಲ್ಲದೆ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ವೈದ್ಯರಾದ ದೀಫಕ್ ಹಲ್ದೀಪುರ್ ತಿಳಿಸಿದ್ದಾರೆ.

ಡಾ ಹೆಚ್.ವಿ ಮಧುಸೂಧನ್ ಮಾತನಾಡಿ, ಕಳೆದ ಎರಡು ವಾರದಲ್ಲಿ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ 15 ಕ್ಕೂ ಹೆಚ್ಚು ಬ್ಯಾಕ್ ಫಂಗಸ್ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದೆ. ಇದು ಸೈಲೆಂಟ್ ಕಿಲ್ಲರ್ ಸೋಂಕು ಆಗಿದ್ದು, ಕೊರೋನಾ ಮೊದಲ ಅಲೆಯಲ್ಲಿ ಕೇವಲ 33 ರೋಗಿಗಳಿಗೆ ಚಿಕಿತ್ಸೆ ನೀಡಿದ್ದೆವು. ಆದರೆ, ಎರಡನೇ ಅಲೆಯ ಸಂದರ್ಭದಲ್ಲಿ ಕೇವಲ 2 ವಾರದಲ್ಲಿ 38 ಜನರಿಗೆ ಸೋಂಕು ತಗುಲಿದ್ದು, ಇದು ಬಹಳ ಆತಂಕಕಾರಿ ವಿಷಯವಾಗಿದೆ. ಕೊರೋನಾದಿಂದ ಗುಣಮುಖರಾದ ಮೇಲೆ ಅದರಲ್ಲೂ ಮಧುಮೇಹ ರೋಗದಿಂದ ಬಳುತ್ತಿರುವವರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸಲಹೆ ನೀಡಿದರು.
ವಿಶೇಷ ಚಿಕಿತ್ಸಾ ವಿಭಾಗ:
ಈ ಫಂಗಸ್ ಸೋಂಕು ಬಹು ಬೇಗನೆ ಇತರರಿಗೆ ಹರಡುತ್ತದೆ. ಹಾಗಾಗಿ ಇದಕ್ಕೆ ಚಿಕಿತ್ಸೆ ನೀಡುವ ವೈದ್ಯರಿಗೂ ಈ ಸೋಂಕು ತಗುಲುವ ಭೀತಿ ಇದೆ. ಆದ್ದರಿಂದ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗಾಗಿ ವಿಶೇಷ ವಿಭಾಗವನ್ನು ರಚಿಸಲಾಗಿದೆ. ಈ ತಂಡದಲ್ಲಿ ಇಎನ್ಟಿ ವಿಭಾಗದ ನಿರ್ದೇಶಕರಾದ ಡಾ ದೀಪಕ್ ಹಲ್ದೀಪುರ್, ನ್ಯೂರಸೈನ್ಸಸ್ ವಿಭಾಗದ ನಿರ್ದೇಶಕರಾದ ಡಾ. ಹೆಚ್. ವಿ ಮಧುಸೂಧನ್, ಮ್ಯಾಕ್ಸಿಲಲೋಫೇಶಿಯಲ್ ತಜ್ಞರಾದ ಡಾ ಆದಿತ್ಯಾ ಮೂರ್ತಿ, ಕಣ್ಣಿನ ತಜ್ಞರಾದ ಡಾ ಪ್ರೀತಿ ಕಾಳೆ ಇದ್ದಾರೆ.
ಸಾರ್ವಜನಿಕರಲ್ಲಿ ಈ ಸೋಂಕಿನ ಬಗ್ಗೆ ತಿಳುವಳಿಕೆ ಮೂಡಿಸುವ ಅಗತ್ಯತೆ ಹೆಚ್ಚಾಗಿದ್ದು, ಮೇಲೆ ತಿಳಿಸಿದ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಅಶೋಕ್ ಆರ್
ಟ್ರಸ್ಟ್ ವೆಲ್ ಆಸ್ಪತ್ರೆ
ಮಾರ್ಕೇಟಿಂಗ್ ವಿಭಾಗದ ಮುಖ್ಯಸ್ಥರು
ಮೊ: 91 99004 42219

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯ ನಮ್ಮ ಕೈಯಲ್ಲಿದೆ. ಇದು ಸಾಕ್ಷಾಟಿವಿ ಕಳಕಳಿ.
ವಾಟ್ಸಾಪ್ ಮೂಲಕ ವ್ಯಾಕ್ಸಿನೇಷನ್ ಸೆಂಟರ್ ಅನ್ನು ಹೇಗೆ ಕಂಡುಹಿಡಿಯಬಹುದು ?#Covid #VaccinationCenter #WhatsApp https://t.co/2yTqNJTvY2
— Saaksha TV (@SaakshaTv) May 7, 2021
ಕಾಳು ಮೆಣಸು ಸಾರು (ಬಾಣಂತಿ ಸಾರು )#Saakshatv #cooking #recipe https://t.co/43m1leMELu
— Saaksha TV (@SaakshaTv) May 9, 2021
https://twitter.com/SaakshaTv/status/1390506933489180675?s=19
https://twitter.com/SaakshaTv/status/1390494846192922625?s=19
#blackfungus #trusthospital








