ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಭರ್ಜರಿ ಶತಕ ಸಿಡಿಸಿದ ಕೆ.ಎಲ್ ರಾಹುಲ್
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದ ಹಾನರ್ ಬೋರ್ಡ್ ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಶತಕ ಸಿಡಿಸಿ ಕಳೆದ ಮೂರು ವರ್ಷಗಳಲ್ಲಿ ವಿದೇಶಿ ನೆಲದಲ್ಲಿ ಶತಕ ಬಾರಿಸಿದ ಭಾರತೀಯ ಮೊದಲ ಆರಂಭಿಕ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಈ ಮೊದಲು 2018ರ ಇಂಗ್ಲೆಂಡ್ ಪ್ರವಾಸದಲ್ಲಿ ರಾಹುಲ್ ಶತಕ ಸಿಡಿಸಿದ್ದರು.ಅಷ್ಟೇ ಅಲ್ಲ ಇತಿಹಾಸ ಪ್ರಸಿದ್ಧ ಲಾರ್ಡ್ಸ್ ಅಂಗಳದಲ್ಲಿ ಶತಕ ಸಿಡಿಸಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಎಂಬ ಸಾಧನೆಗೂ ರಾಹುಲ್ ಭಾಜನರಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧ ಆರಂಭವಾದ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ರಾಹುಲ್, ಟೆಸ್ಟ್ ವೃತ್ತಿ ಜೀವನದ ಆರನೇ ಹಾಗೂ ಇಂಗ್ಲೆಂಡ್ ವಿರುದ್ಧ ಮೂರನೇ ಶತಕ ಪೂರೈಸಿದ್ದಾರೆ.

ಗುರುವಾರ ಬೆಳಗ್ಗೆ ಪ್ರಾರಂಭವಾದ ಟೆಸ್ಟ್ ಪಂದ್ಯದ ಮೊದಲ ದಿನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ಭಾರತ ತಂಡಕ್ಕೆ ಕೆ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಮೊದಲನೇ ವಿಕೆಟ್‌ಗೆ 126 ರನ್ ಜೊತೆಯಾಟ ನೀಡುವ ಮೂಲಕ ಭರ್ಜರಿ ಆರಂಭ ತಂದುಕೊಟ್ಟಿದ್ದಾರೆ.








