ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು ವರ್ಷಗಳಿಂದ ದೇಶ ಹಾಗೂ ವಿದೇಶಗಳಲ್ಲಿ ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಆದರೂ ಜುನೈದ್ ಅಹಮದ್ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಹಾಯವನ್ನು ಕೋರಲಾಗಿದೆ. ಈತನ ಕುರಿತಂತೆ ಖಚಿತ ಮಾಹಿತಿ ನೀಡುವವರಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.
ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಮಾಹಿತಿ ನೀಡುವವರ ಗುರುತನ್ನು ಸಂಪೂರ್ಣ ರಹಸ್ಯವಾಗಿಡಲಾಗುತ್ತದೆ. ಯಾವುದೇ ಶಂಕಾಸ್ಪದ ಮಾಹಿತಿ ಇದ್ದಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ ಎನ್ಐಎ ಕಚೇರಿಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ರಾಷ್ಟ್ರ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತನಿಖಾ ಸಂಸ್ಥೆ ಕೋರಿದೆ.








