ಮಹಿಂದ್ರಾ ಕಂಪನಿಯಿಂದ 1.5 ಕೋಟಿ ವೆಚ್ಚದಲ್ಲಿ ಉಚಿತವಾಗಿ ಅಪೌಷ್ಟಿಕತೆ ಹೊಂದಿರುವ 3-6 ವರ್ಷದ ಮಕ್ಕಳಿಗೆ ನ್ಯೂಟ್ರಿಮಿಕ್ಸ ಅಗ್ರೋ ಕ್ರಾಪ್ ಪೌಷ್ಟಿಕ ಆಹಾರವನ್ನು ಬೆಳಗಾವಿ ಜಿಲ್ಲೆಯಲ್ಲಿ ವಿತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಚಿಕ್ಕೋಡಿ ಪಟ್ಟಣದ ಜಿಲ್ಲಾ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಪೌಡರ್ ವಿತರಿಸಲಾಯಿತು. ಮಹಿಂದ್ರಾ ಕಂಪನಿಯಿಂದ 1.5 ಕೋಟಿ ವೆಚ್ಚದಲ್ಲಿ ಅಪೌಷ್ಟಿಕತೆ ಹೊಂದಿರುವ 3-6 ವರ್ಷದ ಮಕ್ಕಳಿಗೆ ನ್ಯೂಟ್ರಿಮಿಕ್ಸ ಅಗ್ರೋ ಕ್ರಾಪ್ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಇಂದು ಶಿಶುಗಳಿಗೆ ಅಪೌಷ್ಟಿಕತೆ ಎನ್ನುವುದು ಬಹುದೊಡ್ಡ ಕಂಟಕವಾಗಿದ್ದು, ಇದನ್ನು ಹೋಗಲಾಡಿಸಲು ಪ್ರಾಯೋಗಿಕವಾಗಿ ಬೆಳಗಾವಿ ಜಿಲ್ಲೆಯಲ್ಲಿ ಉಚಿತವಾಗಿ ವಿತರಿಸಲು ಕಂಪನಿ ಮುಂದಾಗಿದ್ದು, ಒಳ್ಳೆಯ ಫಲಿತಾಂಶ ಬಂದರೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿತರಿಸಲು ಕ್ರಮ ಕೈಗೊಳ್ಳಲಾಗುವುದುು ಎಂದರು.
ಸಂಸದ ಅಣ್ಣಸಾಹೇಬ ಜೊಲ್ಲೆ ಮಾತನಾಡಿ, ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿಕರೋನ ಸಂದರ್ಭದಲ್ಲಿ ಬಿಸಿಲು- ಮಳೆ ಲೆಕ್ಕಿಸದೆ ದುಡಿಯುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸೂಪರವೈಸರಗಳಿಗೆ ಜೊಲ್ಲೆ ಉದ್ಯೋಗ ಸಮೂಹದಿಂದ 7000 ಕೊಡೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು








