ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ ಡಿಸಿಎಂ ಅಶ್ವತ್ಥ ನಾರಾಯಣ ಅವರು ರಾಜ್ಯದಲ್ಲಿ 1 ಲಕ್ಷ ಜನರಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಇದೆ ಎಂಬ ಆತಂಕಕಾರಿ ಮಾಹಿತಿಯನ್ನು ನೀಡಿದ್ದಾರೆ.
ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, ಈ ಮಾರಣಾಂತಿಕ ಕೊರೊನಾ ವೈರಸ್ ಭೀತಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೇ 39 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇನ್ನೂ 1 ಲಕ್ಷ ಜನರಿಗೆ ಈ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದಲ್ಲದೆ ಕೊರೊನಾ ಸೋಂಕಿತರನ್ನು ಕ್ವಾರಂಟೈನ್‌ನಲ್ಲಿ ಇರಿಸಲು 20 ಸಾವಿರ ಹೋಟೆಲ್ ರೂಮ್ ಪಡೆಯಲು ಮುಂದಾಗಿದ್ದೇವೆ. ಈಗ ವೆಂಟಿಲೇಟರ್ ಸೌಲಭ್ಯ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದಿಂದ ಒಂದು ಸಾವಿರ ವೆಂಟಿಲೇಟರ್ ಆರ್ಡರ್ ಮಾಡಿದ್ದೇವೆ. 15 ಲಕ್ಷ ನಾರ್ಮಲ್ ಮಾಸ್ಕ್ ಗಳು ಹಾಗೂ5 ಲಕ್ಷ ಓ-95 ಮಾಸ್ಕ್ ಆರ್ಡರ್ ಮಾಡಿದ್ದೇವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.








