ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ : ಬೊಮ್ಮಾಯಿ

1 min read
Basavaraja Bommai saaksha tv

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ : ಬೊಮ್ಮಾಯಿ

ಬೆಂಗಳೂರು : ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 10 ಕೋಟಿ ರುಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಇಂದು ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧೀಕಾರಿಗಳು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.

ಈ ಭೇಟಿ ಬಳಿಕ ಮಾತನಾಡಿದ ಬೊಮ್ಮಾಯಿ, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ.

Goa SAAKSHA TV

ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕøತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ.

ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಅಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ತಿಳಿಸಿದರು.

ಈ ವೇಳೆ ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd