ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Samagra karnataka

ಕೊರೋನಾ ಸೋಂಕನ್ನು ಮೆಟ್ಟಿ ಬಂದ 10 ತಿಂಗಳ ಹಸುಗೂಸು

admin by admin
April 11, 2020
in Samagra karnataka
Birth Certificate
Share on FacebookShare on TwitterShare on WhatsappShare on Telegram

Related posts

high-court-invalidates-election-of-congress-mla-nanje-gowda-orders-recount-of-votes

ಕಾಂಗ್ರೆಸ್‌ ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

September 16, 2025
ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ

November 21, 2024

ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕೊರೊನಾ ಸೋಂಕು ತಗುಲಿದ 10 ತಿಂಗಳ ಮಗು ಸಂಪೂರ್ಣ ಗುಣಮುಖವಾಗಿ ಶನಿವಾರ ಮನೆಗೆ ವಾಪಾಸ್ಸಾಗಿದೆ. ಮಗುವಿನ ಜೊತೆ ಇದ್ದ ಮಗುವಿನ ತಾಯಿ ಮತ್ತು ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಎಂದು ಬಂದಿದ್ದು, ಇವರು ಕೂಡ ಮಗುವಿನ ಜೊತೆ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದಾರೆ.
ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಗುವನ್ನು ಮಾರ್ಚ್ 23ರಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಗುವಿನಲ್ಲಿ ಕೊರೋನಾ ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗುವಿನ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿತ್ತು. ಮಾರ್ಚ್ 26ರಂದು ಬಂದ ವರದಿ ಮಗುವಿಗೆ ಕೊರೊನಾ ಸೋಂಕು ತಗುಲಿರುವುದನ್ನು ದೃಢಪಡಿಸಿತು.
10 ತಿಂಗಳ ಮಗುವಿಗೆ ಕೊರೊನಾ ಸೋಂಕು ತಗುಲಿರುವುದು ರಾಜ್ಯದಲ್ಲೇ ಮೊದಲ ಪ್ರಕರಣವಾಗಿದ್ದು, ಎದೆ ಹಾಲು ಕುಡಿಯುವ ಕಂದಮ್ಮನಿಗೆ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ವೈದ್ಯರಿಗೂ ಕೂಡ ಸವಾಲಾಗಿ ಪರಿಣಮಿಸಿತ್ತು. ‌ಆದರೆ ಸವಾಲನ್ನು ಯಶಸ್ವಿಯಾಗಿ ಎದುರಿಸಿದ ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖಗೊಳಿಸಿದ್ದಾರೆ.
ಮಗುವಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮವನ್ನು ಸಂಪೂರ್ಣ ಸೀಲ್ ಮಾಡಲಾಗಿದ್ದು, ಗ್ರಾಮಸ್ಥರು ಬಹಳ ಉತ್ತಮ ಸಹಕಾರ ನೀಡಿದ್ದರು. ಈ ಸಮಯದಲ್ಲಿ ಜಿಲ್ಲಾಡಳಿತವೇ ಗ್ರಾಮಸ್ಥರಿಗೆ ಎಲ್ಲಾ ಅಗತ್ಯ ಸಾಮಾಗ್ರಿಗಳು, ಸೌಲಭ್ಯಗಳನ್ನು ಮನೆ ಬಾಗಿಲಿಗೆ ಒದಗಿಸಿತ್ತು.‌ ಗ್ರಾಮದಲ್ಲೂ ಕೊರೊನಾ ಸೋಂಕು ಯಾರಿಗೂ ಹರಡದಿರುವುದು ಕೂಡ ಸಮಾಧಾನಕರ ವಿಷಯವಾಗಿದೆ.

Tags: #coronakarnataka#Covid_19india#IndiaFightsCorona#StayHomeSaveLives
ShareTweetSendShare
Join us on:

Related Posts

high-court-invalidates-election-of-congress-mla-nanje-gowda-orders-recount-of-votes

ಕಾಂಗ್ರೆಸ್‌ ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

by Saaksha Editor
September 16, 2025
0

ಬೆಂಗಳೂರು, ಸೆ.16: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ (Congress) ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಮತ...

ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ

by Shwetha
November 21, 2024
0

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಸತ್ರ ನ್ಯಾಯಾಲಯದ FTSC-1 (ಫಾಸ್ಟ್ ಟ್ರಾಕ್ ವಿಶೇಷ ಕೋರ್ಟ್) ಅಪರಾಧಿ ರಾಜು...

ಹಲವರ ಆಸ್ತಿ ಕಂಡು ಲೋಕಾಯುಕ್ತ ಅಧಿಕಾರಿಗಳಿಗೆ ಶಾಕ್

ಹಲವರ ಆಸ್ತಿ ಕಂಡು ಲೋಕಾಯುಕ್ತ ಅಧಿಕಾರಿಗಳಿಗೆ ಶಾಕ್

by Author2
July 19, 2024
0

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದೆ. 12 ಜನ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು (Bengaluru)...

ಮಳೆಯಿಂದಾಗಿ ವಾಯು ಗುಣಮಟ್ಟದಲ್ಲಿ ಹೆಚ್ಚಳ

ಮಳೆಯಿಂದಾಗಿ ವಾಯು ಗುಣಮಟ್ಟದಲ್ಲಿ ಹೆಚ್ಚಳ

by Author2
November 10, 2023
0

ನವದೆಹಲಿ: ರಾಜಧಾನಿ ದೆಹಲಿಯ (Delhi) ಹಲವು ಪ್ರದೇಶಗಳಲ್ಲಿ ಏಕಾಏಕಿ ಮಳೆಯಾದ ಹಿನ್ನೆಲೆಯಲ್ಲಿ ವಿಷಕಾರಿ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ ಕಂಡು ಬಂದಿದೆ. ರಾಷ್ಟ್ರ ರಾಜಧಾನಿಯ ನೋಯ್ಡಾ, ಗುರುಗ್ರಾಮ, ರಾಷ್ಟ್ರೀಯ...

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

by Author2
October 31, 2023
0

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಮುನ್ಸೂಚನೆ ಇದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram