ಚೆನ್ನೈ: ಅಕ್ರಮ ಕಳ್ಳಭಟ್ಟಿ (Hooch Tragedy) ಸೇವಿಸಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರ ತಮಿಳುನಾಡಿನ ಕಲ್ಲಕುರಿಚಿ (Kallakurichi) ಜಿಲ್ಲೆಯಲ್ಲಿ ನಡೆದಿದೆ.
ಅಲ್ಲದೇ, 20ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. 49 ವರ್ಷದ ಕೆ. ಕನ್ನುಕುಟ್ಟಿ ಬಂಧಿತ ವ್ಯಕ್ತಿ. ಆತನಿಂದ ವಶಪಡಿಸಿಕೊಂಡ ಸುಮಾರು 200 ಲೀಟರ್ ಅಕ್ರಮ ಕಳ್ಳಭಟ್ಟಿಯಲ್ಲಿ ಮಾರಣಾಂತಿಕ ಮೆಥನಾಲ್ ಇರುವಿಕೆಯನ್ನು ಬಹಿರಂಗಪಡಿಸಿದೆ ಎಂದು ಸರ್ಕಾರ ಹೇಳಿದೆ.
ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಕಲ್ಲಕುರಿಚಿಯಲ್ಲಿ ಕಲಬೆರಕೆಯ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು. ಈ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಈ ದುರಂತವನ್ನು ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.