ವಿಶಾಖಪಟ್ಟಣಂ : ಕ್ರೇನ್ ಕುಸಿದ ಪರಿಣಾಮ 10 ಮಂದಿ ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂನ ಹಿಂದೂಸ್ತಾನ್ ಷಿಪ್ ಯಾರ್ಡ್ ಲಿಮಿಟೆಡ್ ಘಟಕದಲ್ಲಿ ನಡೆದಿದೆ. ಈ ದುರಂತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಂದಿನಂತೆ ಇಂದೂ ಕೂಡ ಶಿಪ್ ಯಾರ್ಡ್ ನಲ್ಲಿ ಲೋಡ್ ಅನ್ ಲೋಡ್ ಕಾರ್ಯ ನಡೆಯುತ್ತಿತ್ತು. ಈ ವೇಳೆ ಇದ್ದಕಿದ್ದಂತೆ ಕ್ರೇನ್ ಕುಸಿದಿದೆ. ಪರಿಣಾಮ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಕ್ರೇನ್ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
#WATCH A crane collapses at Hindustan Shipyard Limited in Visakhapatnam, Andhra Pradesh. 10 dead and 1 injured in the incident, says DCP Suresh Babu. pic.twitter.com/BOuz1PdJu3
— ANI (@ANI) August 1, 2020
ಇದೀಗ ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ರಕ್ಷಣಾ ತಂಡದ ಸದಸ್ಯರು, ಕ್ರೈನ್ ಅಡಿಯಲ್ಲಿ ಸಿಲುಕಿರುವಂತ ಕಾರ್ಮಿಕರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.