ನವದೆಹಲಿ: ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಿದರೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ.ವರೆಗೂ ದಂಡ ವಿಧಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.
ಈ ಮೂಲಕ ಅಕ್ರಮಗಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಈ ರೀತಿಯ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ ನೇಮಕಾತಿ ಪರೀಕ್ಷೆಗಳಲ್ಲಿ (Central Exams) ಅಕ್ರಮ ಎಸಗಿದರೆ 3 ರಿಂದ 10 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ.ವರೆಗೆ ದಂಡ ವಿಧಿಸುವ ಮಸೂದೆ ಮಂಡಿಸಲಾಗಿದೆ.
ಕೇಂದ್ರೀಯ ನೇಮಕಾತಿ, ಪ್ರವೇಶ ಪರೀಕ್ಷೆ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೆ ನೇಮಕಾತಿ ಮಂಡಳಿಗಳು, ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗಳಿಗೆ ಈ ನಿಯಮ ಅನ್ವಯಿಸುತ್ತದೆ.
ನೇಮಕಾತಿ ವೇಳೆ ಯಾವುದೇ ಅಕ್ರಮ ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.