ಮುಂಬಯಿ: ಮಹಾರಾಷ್ಟ್ರ (Maharashtra), ಜಾರ್ಖಂಡ್ ಸೇರಿದಂತೆ 14 ರಾಜ್ಯಗಳಲ್ಲಿ ಒಟ್ಟು 1 ಸಾವಿರ ಕೋಟಿ ರೂ. ಮೌಲ್ಯದ ನಗದು, ಮದ್ಯ ಹಾಗೂ ಇತರ ಮಾದಕ ವಸ್ತುಗಳನ್ನು ಚುನಾವಣಾ ಆಯೋಗ (Election Commission) ವಶಪಡಿಸಿಕೊಂಡಿದೆ. ಈ ಕೋಟಿ ಪೈಕಿ 858 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಮಹಾರಾಷ್ಟ್ರ ಜಾರ್ಖಂಡ್ನಲ್ಲೇ ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.
2019ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಪ್ರಮಾಣಕ್ಕಿಂತ ಶೇ. 7 ಪಟ್ಟು ಹೆಚ್ಚು ಹೆಚ್ಚಾಗಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 103.61 ಕೋಟಿ ರೂ. ಹಾಗೂ ಜಾರ್ಖಂಡ್ ನಲ್ಲಿ (Jharkhand) 18.76 ಕೋಟಿ ರೂ. ಮೌಲ್ಯದ ನಗದು, ಮದ್ಯ ಹಾಗೂ ಇತರ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಾರಿ ದೇಶಾದ್ಯಂತ ಒಟ್ಟು 8,889 ಕೋಟಿ ಮೌಲ್ಯದ ನಗದು, ಡ್ರಗ್ಸ್, ಮದ್ಯ ಜಪ್ತಿ ಮಾಡಿತ್ತು.
ಮಹಾರಾಷ್ಟ್ರ, ಜಾರ್ಖಂಡ್ ಸೇರಿದಂತೆ 14 ರಾಜ್ಯಗಳಿಗೆ ಉಪಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ನಗದು ಸೇರಿ ಒಟ್ಟು 1 ಸಾವಿರ ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೇ, ಚಿನ್ನಾಭರಣ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.