ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟ ಜೋರಾಗಿದೆ. ಪ್ರತಿದಿನ ರಾಜ್ಯದಲ್ಲಿ ಕೊರೊನಾ ಮಹಾ ಸ್ಫೋಟವಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿರುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ.
ಒಂದು ಕಡೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದರೂ ಜೀವನವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.
ಮಾಸ್ಕ್ ಧರಿಸಿದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಮಾಸ್ಕ್ ಧರಿಸದೇ ಕೊರೊನಾ ನಿಯಮ ಉಲ್ಲಂಘಿಸುವವರಿಗೆ ಮೊದಲು ಸಲ 1000 ರೂ. ದಂಡ, ಮೂರನೇ ಬಾರಿ ಸಿಕ್ಕಿಬಿದ್ದರೆ 1000 ರೂ. ದಂಡದ ಜತೆಗೆ 1 ವರ್ಷ ಜೈಲು ಶಿಕ್ಷೆ ವಿಧಿಸುವಂತಹ ಕಠಿಣ ಕ್ರಮ ಕೈಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 62 ಲಕ್ಷಕ್ಕೆ ಏರಿಕೆ
ಅಲ್ಲದೆ ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬಳಿ ಮಾತುಕತೆ ನಡೆಸಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ.









