ನವದೆಹಲಿ : ಪ್ರತಿ ವಲಸೆ ಕಾರ್ಮಿಕ ಕುಟುಂಬಕ್ಕೆ 10 ಸಾವಿರ ರೂಪಾಯಿ ನೀಡಬೇಕೆಂದು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಅವರು, ದೇಶದಲ್ಲಿ ಲಾಕ್ ಡೌನ್ ನಿಂದಾಗಿ ವಲಸೆ ಕಾರ್ಮಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರು ಕೆಲಸ ಮಾಡುವ ಸ್ಥಳದಿಂದ ತಮ್ಮ ಊರಿಗೆ ಹೋಗಲು ಪರದಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಬೇಕು. ರೈಲ್ವೆ ಇಲಾಖೆ ಆದಷ್ಟು ಹೆಚ್ಚು ರೈಲುಗಳನ್ನು ಓಡಿಸಬೇಕು ಎಂದು ಒತ್ತಾಯಿಸಿದ್ದಾರೆ.
https://twitter.com/PChidambaram_IN/status/1265886045641424898?s=20
ಅಲ್ಲದೆ ತಮ್ಮ ರಾಜ್ಯಕ್ಕೆ ಮರಳಿದ ನಂತರ ಪರೀಕ್ಷೆ ನಡೆಸಿ ಪ್ರತಿ ವಲಸೆ ಕಾರ್ಮಿಕ ಕುಟುಂಬಕ್ಕೆ ಪ್ರಸ್ತುತ ಬಿಕ್ಕಟ್ಟನ್ನು ಎದುರಿಸಲು 10 ಸಾವಿರ ರೂಪಾಯಿ ನೀಡಬೇಕು. ಈಗಾಗಲೇ ಹಣವಿಲ್ಲದೆ 2 ತಿಂಗಳು ಕಳೆದಿದ್ದಾರೆ. ಮುಂದಿನ ಎರಡು ತಿಂಗಳುಗಳ ಕಾಲ ಅವರು ಹಣ ಗಳಿಸಲು ಕಷ್ಟವಾಗಬಹುದು. ಹೀಗಾಗಿ ತುರ್ತಾಗಿ 10 ಸಾವಿರ ರೂಪಾಯಿ ನೀಡಬೇಕು ಎಂದು ಚಿದಂಬರಂ ಒತ್ತಾಯಿಸಿದ್ದಾರೆ.








