Amazon
ಇ ಕಾಮರ್ಸ್ ದೈತ್ಯ ಕಂಪನಿ ಅಮೆಜಾನ್ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ನಿರ್ಧರಿಸಿದೆ ಅನ್ನೊ ಆಘಾತಕಾರಿ ಮಾಹಿತಿ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣ ಕಂಪನಿಗಳಲ್ಲಿ ಒಂದಾದ ಟ್ವಿಟರ್ ಉದ್ಯೋಗ ಕಡಿತ ಮಾಡಿದ ಬೆನ್ನಲ್ಲೇ ಇದೀಗ ಈ ಮಾಹಿತಿ ಹೊರಬಿದ್ದಿದೆ.
ಕಳೆದ ತ್ರೈಮಾಸಿಕದಲ್ಲಿ ನಿರೀಕ್ಷಿತ ಲಾಭ ಬಂದಿಲ್ಲದೇ ಇರುವ ಹಿನ್ನಲೆಯಲ್ಲಿ ಸುಮಾರು 10 ಸಾವಿರ ಉದ್ಯೋಗ ಕಡಿತಕ್ಕೆ ಅಮೆಜಾನ್ ಮುಂದಾಗಿದೆ ಎಂದು ವರದಿಗಳು ತಿಳಿಸಿದೆ. ಹಾಗಾಗಿ ಉಳಿತಾಯ ಕ್ರಮದ ಅಡಿಯಲ್ಲಿ ಶೀಘ್ರವೇ ಕೆಲ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶ್ವದಾದ್ಯಂತ ಸುಮಾರು 1.6 ಮಿಲಿಯನ್ ಉದ್ಯೋಗಿಗಳು ಅಮೆಜಾನ್ನಲ್ಲಿ ಕೆಲಸ ಮಾಡುತ್ತಿದ್ದು, ಒಂದು ವೇಳೆ 10 ಸಾವಿರ ಉದ್ಯೋಗಗಳನ್ನು ಕಡಿತಗೊಳಿಸಿದರೆ ಅದು ಅಮೆಜಾನ್ ಇತಿಹಾಸದಲ್ಲೇ ಬಹು ದೊಡ್ಡ ಉದ್ಯೋಗ ಕಡಿತವಾಗಲಿದೆ.