ಕೊಪ್ಪಳ: ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ 101 ಜನರನ್ನು ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಅಸ್ಪೃಶ್ಯತೆ ಆಚರಣೆಯ ಹಿನ್ನೆಲೆಯಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಗಲಭೆಯಲ್ಲಿ ಭಾಗಿಯಾಗಿದ್ದ 101 ಜನರ ವಿರುದ್ಧ ಆರೋಪ ಸಾಬೀತಾಗಿದ್ದು, ಕೋರ್ಟ್ ಅ. 24ರಂದು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸುವುದಾಗಿ ಹೇಳಿದ್ದಾರೆ.
2014ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹೊಟೇಲ್ ಹಾಗೂ ಕ್ಷೌರದ ಅಂಗಡಿಯನ್ನು ಧ್ವಂಸ ಮಾಡಿದ್ದರು. ಜೊತೆಗೆ ದಲಿತ ಕೇರಿಯ 4 ಗುಡಿಸಲುಗಳನ್ನು ಸುಟ್ಟು ಹಾಕಿದ್ದರು. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಘಟನೆಯಲ್ಲಿ ಭಾಗಿಯಾದ 117 ಜನರಲ್ಲಿ 101 ಜನರ ಮೇಲಿನ ಆರೋಪ ಸಾಬೀತಾಗಿದೆ. ಇದರಿಂದಾಗಿ ಭಾರಿ ಪ್ರಮಾಣದಲ್ಲಿ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. ಕೆಲವರು ಸಾವನ್ನಪ್ಪಿದ್ದು, 101 ಜನರು ಮಾತ್ರ ಜೀವಂತವಾಗಿದ್ದಾರೆ. ಅವರಲ್ಲಿ ನ್ಯಾಯಲಯಕ್ಕೆ ಹಾಜರಾಗಿದ್ದ 100 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅಸ್ಪೃಶ್ಯತೆಯ ಕಾರಣಕ್ಕೆ ಶಿಕ್ಷೆಯಾಗುತ್ತಿರುವುದು ಇದು ದೊಡ್ಡ ಪ್ರಕರಣವಾಗಿದೆ ಎಂದು ಅಭಿಯೋಜಕರು ಹೇಳಿದ್ದಾರೆ. ಶಿಕ್ಷೆಯ ಕುರಿತು ಈಗ ಜನರು ಕುತೂಹಲ ವ್ಯಕ್ತಪಡಿಸಿದ್ದಾರೆ.