ದೇಶದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಕಳೆದ 24 ಗಂಟೆಗಳಲ್ಲಿ 10,158 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತ್ಯಧಿಕ ಸೋಂಕು ಪ್ರಕರಣಗಲು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಸದ್ಯ ದೇಶದಲ್ಲಿ 44,998 ಸಕ್ರಿಯ ಪ್ರಕರಣಗಳಿದ್ದು, ಬುಧವಾರ 7,830 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ದೈನಂದಿನ ಪಾಸಿಟಿವಿಟಿ ದರ ಶೇ 4.42ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.02ರಷ್ಟಿದೆ. ಇದೇ ವೇಳೆ ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಮರಣ ಪ್ರಮಾಣ ಶೇ 1.19ರಷ್ಟಿದ್ದರೆ, ಇಲ್ಲಿಯವರೆಗೆ ದೇಶದಲ್ಲಿ 4,42,10,127 ಜನ ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದಡಿ 220.66 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ ಗಳನ್ನು ವಿತರಿಸಲಾಗಿದೆ.








