ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಜೊತೆ ಪ್ರಧಾನಿ ಮೋದಿ ಚರ್ಚೆ..!
ಅಮೆರಿಕಾದ ಮಾಜಿ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಹಾಗೂ ಮೋದಿ ಸ್ನೇಹ ಇಡೀ ವಿಶ್ವಕ್ಕೆ ಗೊತ್ತಿದೆ. ಆದ್ರೆ ಇದೀಗ ಅಮೆರಿಕಾದಲ್ಲಿ ನೂತನ ಅಧ್ಯಕ್ಷ ಜೋ ಬೈಡೆನ್ ಅವರ ಅಧಿಕಾರವಿದೆ. ಆದ್ರೆ ಜೋ ಬೈಡೆನ್ ಅಧಿಕಾರ ಸ್ವೀಕಾರದ ನಂತರ ಇದೇ ಮೊದಲ ಬಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೈಡೆನ್ ಅವರನ್ನ ನೇರವಾಗಿ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಸೆಪ್ಟೆಂಬರ್ 24 ರಂದು ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನೇರ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಭೌತಿಕವಾಗಿ ಕ್ವಾಡ್ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ.
ಆದ್ರೆ ಬೈಡೆನ್ ಭೇಟಿಯ ಹಿಂದಿನ ದಿನ ಅಂದ್ರೆ ಸೆಪ್ಟೆಂಬರ್ 23ರಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಮೋದಿ ಅವರು. 3 ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ ಅವರು ಹಲವು ಉನ್ನತ ಮಟ್ಟದ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
“ಅಧಿಕಾರಿಗಳಿರೋದೇ ನಮ್ಮ ಚಪ್ಪಲಿ ಎತ್ತಿಕೊಳ್ಳುವುದಕ್ಕೆ” : ಉಮಾಭಾರತಿ ವಿವಾದ..!
ಭಾರತ , ಅಮೆರಿಕ, ಆಸ್ಟ್ರೇಲಿಯಾ ಹಾಗೂ ಜಪಾನ್ ರಾಷ್ಟ್ರಗಳನ್ನು ಒಳಗೊಂಡ ಕ್ವಾಡ್ ಶೃಂಗಸಭೆಯು ಸೆಪ್ಟೆಂಬರ್ 24ರಂದು ವಾಷಿಂಗ್ಟನ್ ನಲ್ಲಿ ನಡೆಯಲಿದೆ. ಶ್ವೇತ ಭವನದಲ್ಲಿ ಸೆಪ್ಟೆಂಬರ್ 24ರಂದು ಮೋದಿ ಅವರು ಬೈಡೆನ್ ಅವರನ್ನ ಭೇಟಿ ಮಾಡಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸೆಪ್ಟೆಂಬರ್ 25ರಂದು ನ್ಯೂಯಾರ್ಕ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸಭೆಯಲ್ಲಿ ವಿಶ್ವದ ನಾಯಕರಾದ ಭಾರತದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಜಪಾನ್ ಪ್ರಧಾನಿ ಯೋಶಿಹಿದೆ ಸೂಗಾ, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮೊರಿಸನ್ ಇರಲಿದ್ದಾರೆ.