ಕೋವಿಡ್ ರಿಪೋರ್ಟ್ : ದೇಶದಲ್ಲಿ ಒಂದೇ ದಿನ 31,923 ಕೊರೊನಾ ಪ್ರಕರಣಗಳು ದೃಢ
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 31,923 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 282 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 33563421ಕ್ಕೆ ತಲುಪಿದ್ದು, ಹೆಮ್ಮಾರಿ ಸೋಂಕಿನಿಂದ ಉಸಿರು ನಿಲ್ಲಿಸಿದವರ ಸಂಖ್ಯೆ 4,46,050ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ 31,990 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಾದ್ಯಂತ ಈವರೆಗೂ 3,28,15,731 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿನ್ನೂ 3,01,604 ಸಕ್ರಿಯ ಪ್ರಕರಣಗಳಿವೆ. ಇನ್ನು ಭಾರತದಲ್ಲಿ ಒಂದೇ 15,27,443 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು , ಈವರೆಗೂ 55,83,67,013 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.









