ಮಹಾರಾಷ್ಟ್ರದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
15 ವರ್ಷದ ಬಾಲಕಿಯ ಮೇಲೆ 29 ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಡೊಂಬಿವಿಲಿ ಪ್ರದೇಶದಲ್ಲಿ ನಡೆದಿದೆ.
ಅಪ್ರಾಪ್ತರು ಸೇರಿದಂತೆ 29 ಮಂದಿ ನಿರಂತರವಾಗಿ ಹಲವು ತಿಂಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರೋ ಆಘಾತಕಾರಿ ಮಾಹಿತಿ ಸಿಕ್ಕಿದೆ.
ಈ ಸಂಬಂಧ ಮನಪಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
29 ಮಂದಿ ವಿರುದ್ಧ IPC ಸೆಕ್ಷನ್ 376 ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರತಿ ಬಾರಿ ಬಾಲಕಿಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗುವುದು ವೀಡಿಯೋ ಮಾಡಿ ಅದನ್ನು ತೋರಿಸಿ ಬ್ಲಾಕ್ ಮೇಲೆ ಮಾಡುತ್ತಿದ್ದರು ಎನ್ನಲಾಗಿದೆ.
ಅಪರಾಧದಲ್ಲಿ ಕೆಲ ಅಪ್ರಾಪ್ತರು ಕೂಡ ಶಾಮೀಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಮುಕರ ಅಟ್ಟಹಾಸ ಹೆಚ್ಚಾದಂತೆ ಬೇಸತ್ತ ಬಾಲಕಿ ದೊಂಬಿವಲಿಯ ಮನ್ ಪಡ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಇನ್ನೂ 29 ಆರೋಪಿಗಳ ಹೆಸರನ್ನೂ ಸಹ ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇಬ್ಬರು ಅಪ್ರಾಪ್ತರು ಸೇರಿದಂತೆ 23 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಉಳಿದವರ ಸೆರೆಗೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.








