ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಲಸಿಕೆ ನೀಡುವುದಿಲ್ಲ..!
ಬೆಂಗಳೂರು : ಇನ್ನೇನು ಕೊರೊನಾ 2ನೇ ಅಲೆ ತಗ್ಗಿತು ಆತಂಕ ಪಡೋ ಅಗತ್ಯ ಏನೂ ಇಲ್ಲ ಅಂತ ಜನರು ನಿಟ್ಟುಸಿರು ಬಿಡುತ್ತಿರುವ ಹೊತ್ತಲ್ಲೇ ಮತ್ತೆ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ.. ದೇಶದಲ್ಲಿ ದಿನನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ..
ಇನ್ನೂ ಕೋವಿಡ್ ಹಾವಳಿಯ ನಡುವೆಯೇ ಸಮಾಧಾನಕರ ಸಂಗತಿಯೆಂದ್ರೆ , ಮಹಾಮಾರಿಯ ವಿರುದ್ಧ ಹೋರಾಟದಲ್ಲಿ ರಾಮಬಾಣವಾಗಿರುವ ಕೊರೊನಾ ಲಸಿಕೆ ಅಭಿಯಾನವೂ ಕೂಡ ವೇಗ ಪಡೆದುಕೊಂಡಿದೆ. ಭಾರತದಲ್ಲಿ ಹಾಗೂ ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆಯಲು ಜನರು ಜಾಗರೂಕರಾಗ್ತಿದ್ದಾರೆ. ಆದ್ರೆ ಕೆಲವರು ಕೆಲಸಗಳ ಒತ್ತಡ ಅದು ಇಇದು ಕೆಲಸ , ಭಾನುವಾರ ಹಾಕಿಸಿಕೊಂಡ್ರೆ ಆಯ್ತು ಅಂತ ಕಾಯ್ತಿದ್ದಾರೆ. ಆದ್ರೆ ಅಂತವರಿಗೆ ಈ ಸುದ್ದಿ ನಿರಾಸೆ ಮೂಡಿಸಲಿದೆ. ಕಾರಣ ಇನ್ಮುಂದೆ ಭಾನುವಾರ ಲಸಿಕೆ ನೀಡುವುದಿಲ್ಲ.
ಹೌದು.. ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಭಾನುವಾರವೂ ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ಇಲ್ಲದದೇ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇನ್ಮುಂದೆ ರಾಜ್ಯದಲ್ಲಿ ಭಾನುವಾರ ಲಸಿಕೆ ನೀಡಲ್ಲ. ಭಾನುವಾರ ಹೊರತುಪಡಿಸಿ ಉಳಿದ 6 ದಿನ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.