ಬಿಜೆಪಿ ಸರ್ಕಾರ ತಾಲಿಬಾನ್ ಸರ್ಕಾರ, ದೇಶ ಮುನ್ನಡೆಸೋದಕ್ಕೆ ಬರಲ್ಲ : ದೀದಿ
ಕೊಲ್ಕತ್ತಾ : ಅಫ್ಗಾನಿಸ್ತಾನದಲ್ಲಿ ತಾಲಿಬಾನಿ ಉಗ್ರರು ಅಧಿಪತ್ಯ ಸಾಧಿಸಿರುವ ಬೆನ್ನಲ್ಲೇ ಭಾರತದಲ್ಲಿ ಅನೇಕ ಪ್ರತಿಪಕ್ಷ ನಾಯಕರು ಬಿಜೆಪಿಯನ್ನ ತಾಲಿಬಾನಿಗಳಿಗೆ ಹೋಲಿಕೆ ಮಾಡ್ತಾ ಹೇಳಿಕೆಗಳನ್ನ ನೀಡ್ತಿದ್ದು, ಇದಕ್ಕೆ ಪರ ವಿರೋಧಗಳು ಕೂಡ ಕೇಳಿ ಬರುತ್ತಿವೆ. ಈ ನಡುವೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಬಿಜೆಪಿಯನ್ನ ತಾಲಿಬಾನಿಗಳಿಗೆ ಹೋಲಿಕೆ ಮಾಡಿ ವಾಗ್ದಾಳಿ ನಡೆಸಿದ್ದಾರೆ.
ಹೌದು.. ತಾಲಿಬಾನಿ ಬಿಜೆಪಿ ಸರ್ಕಾರದಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದಿರುವ ದೀದಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ಜನರು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಸೋಲಿನ ರುಚಿ ತೋರಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 28,326 ಮಂದಿಗೆ ಸೋಂಕು
ಇದೇ ವೇಳೆ ಅಕ್ಟೋಬರ್ ನಲ್ಲಿ ಇಟಲಿಯಲ್ಲಿ ನಡೆಯಲಿರುವ ವಿಶ್ವ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಏಷ್ಯಾದ ಪ್ರತಿನಿಧಿಯಾಗಿ ನನ್ನನ್ನು ಆಮಂತ್ರಿಸಲಾಗಿದೆ. ಆದರೆ ಕೇಂದ್ರ ಸರ್ಕಾರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನಿರಾಕರಿಸಿದೆ. ಕೇಂದ್ರ ಸರ್ಕಾರ ಅಸೂಯೆಯಿಂದ ಅನುಮತಿ ನಿರಾಕರಿಸಿದೆ. ಬಿಜೆಪಿ ಸರ್ಕಾರ ತಾಲಿಬಾನಿ ಸರ್ಕಾರ ಎಂದು ಆಕ್ರೋಶ ಹೊರಹಾಕಿದ್ದಾರೆ.








