ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಭಿಕ್ಷೆ ಅಂದುಕೊಂಡ್ರು ಪರವಾಗಿಲ್ಲ ಸಹಾಯ ಬೇಕು – ನಟಿ ವಿಜಲಕ್ಷ್ಮಿ ಕಣ್ಣೀರು  

Namratha Rao by Namratha Rao
September 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಭಿಕ್ಷೆ ಅಂದುಕೊಂಡ್ರು ಪರವಾಗಿಲ್ಲ ಸಹಾಯ ಬೇಕು – ನಟಿ ವಿಜಲಕ್ಷ್ಮಿ ಕಣ್ಣೀರು

ನಟಿ ವಿಜಯಲಕ್ಷ್ಮಿ ತಾಯಿ ವಯೋಸಹಜವಾದ ಕಾಯಿಲೆಯಿಂದ ನಿಧನರಾಗಿದ್ದಾರೆ. ಇದೀಗ ನಟಿ ವಿಜಯಲಕ್ಷ್ಮಿ ಎಲ್ಲರ ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ ಎಂದಿದ್ದಾರೆ.   ಮಾಧ್ಯಮದವರೊಂದಿಗೆ ಈ ಮಾತನಾಡಿದ ನಟಿ, ಚೆನ್ನೈಯಲ್ಲಿ ಸಮಸ್ಯೆ ಆಗಿ ತಾಯಿ, ಅಕ್ಕನನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದೇನೆ. ಅಕ್ಕ, ತಾಯಿ ನನ್ನ ಮಕ್ಕಳ ಸಮವಾಗಿದ್ದಾರೆ. ಬೆಳಗ್ಗೆ 12 ಗಂಟೆಗೆ ಅಮ್ಮ ಮೃತಪಟ್ಟಿದ್ದು, ನನಗೆ ಆಘಾತ ಆಗಿದೆ. ಜೀವನದಲ್ಲಿ ಸಾಕಷ್ಟು ಹೊಡೆತ ತಿಂದಿದ್ದೇನೆ. ನೀವೆಲ್ಲ ಜೊತೆಗೆ ಇದ್ದೀರಾ. ಅನಾಥ ಆಶ್ರಮಕ್ಕೆ ಕರೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸುತ್ತೇವೆ. ನನ್ನ ಅಕ್ಕ ಉಷಾ ಅವರಿಗೆ ಚಿಕಿತ್ಸೆ ಕೊಡಬೇಕು. ನನ್ನ ಅಕ್ಕನಿಗೆ ಸಾಕಷ್ಟು ಸಮಸ್ಯೆ ಎದುರಾಗಿತ್ತು. ನಾನು ಮಾತನಾಡೋದು ಒರಟು ಅನ್ನಿಸಬಹುದು. ಅಕ್ಕನಿಗೆ ಎಲ್ಲಾ ರೀತಿಯ ಸೇವೆ ನಾನು ಮಾಡುತ್ತಿದ್ದೇನೆ ಎಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ.  ಅಲ್ಲದೇ ಅಮ್ಮ ಬಿಟ್ಟು ಹೋದ ಮೇಲೆ ನಾನು ಬದಲಾಗುತ್ತೇನೆ. ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ. ಇಲ್ಲೇ ಇರುತ್ತೇನೆ ಇಲ್ಲೇ ಜೀವನ ಸಾಗಿಸುತ್ತೇನೆ. ಅಕ್ಕನಿಗೆ ಸಮಸ್ಯೆ ಆದ ಮೇಲೆ ಅಮ್ಮ ಮಾನಸಿಕವಾಗಿ ನೊಂದಿದ್ದರು. ನೀವೆಲ್ಲಾ ಇದ್ದೀರ, ನಾನು ಧೈರ್ಯವಾಗಿ ಇರುತ್ತೇನೆ ಎಂದಿದ್ದಾರೆ.

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಮಿಂಚಿದ್ದ ವಿಜಯಲಕ್ಷ್ಮಿ ನಂತರ ತಮಿಳಿನಲ್ಲಿ ಅವಕಾಶಗಳು ಹೆಚ್ಚಾದ ಬೆನ್ನಲ್ಲೇ ಅಲ್ಲಿಗೆ ಹೋಗಿ ತಮಿಳುನಾಡಿನಲ್ಲಿಯೇ ಉಳಿದುಕೊಂಡಿದ್ದರು.  ಎಷ್ಟೋ ವರ್ಷಗಳಿಂದ ಹೆಚ್ಚು ಸುದ್ದಿಯಲ್ಲಿರದ ವಿಜಯಲಕ್ಷ್ಮಿ ಕೆಲ ದಿನಗಳಿಂದ ಬರೀ ವಿವಾದಗಳಿಂದಳೇ ಸುದ್ದಿಯಲ್ಲಿದ್ದಾರೆ. ಆತ್ಮಹತ್ಯೆ ಯತ್ನ , ಮತ್ತು ಹಲವರ ವಿರುದ್ಧ ಆರೋಪಗಳ ಹೊರೆಸುವ ಜೊತೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋದಾಗಿ ಹೇಳುತ್ತಾ ಅನೇಕರ ಬಳಿ ನೆರವಿಗಾಗಿ ಮನವಿ ಮಾಡಿಕೊಳ್ತಾ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗ್ತಿದ್ದಾರೆ.

ಆದ್ರೆ ಅದೆಷ್ಟೋ ಜನ ನೆಟ್ಟಿಗರು ವಿಜಯಲಕ್ಷ್ಮಿಗೆ ಸಹಾಯಾಸ್ತ ಚಾಚಿದ್ದು, ಇನ್ನೂ ಅನೇಕರು ಆಕೆಯದ್ದು ಬರೀ ಇದೇ ಗೋಳಾಯ್ತು. ಸಿನಿಮಾರಂಗದಲ್ಲಿ ಸಂಪಾದನೆ ಮಾಡಿದ್ದೆಲ್ಲಾ ಎಲ್ಲಿಗೆ ಹೋಯ್ತು ಅಂತೆಲ್ಲಾ ಟ್ರೋಲ್ ಮಾಡ್ತಾಯಿದ್ದಾರೆ. ಅಷ್ಟೇ ಅಲ್ಲ ಇತ್ತೀಚೆಗೆ ವಿಜಯಲಕ್ಷ್ಮಿ ಮತ್ತೊಮ್ಮೆ ಟ್ರೋಲ್ ಆಗುವಂತಾಗಿತ್ತು.

ಹೌದು… ಅಭಿಮಾನಿಯೊಬ್ಬರು ವಿಜಯಲಕ್ಷ್ಮಿಗೆ ಸಹಾಯ ಮಾಡಿದ್ದರು. ವಿಜಯಲಕ್ಷ್ಮಿಗೆ ಉಳಿದುಕೊಳ್ಳಲು ಮನೆಯನ್ನು ಉಚಿತವಾಗಿ ನೀಡಿದ್ರು. ಆದ್ರೆ ಇಲ್ಲೂ ಕೂಡ ತಕರಾರು ತೆಗೆದಿರುವ ನಟಿ ಮನೆಯಲ್ಲಿ ಜಿರಳೆ ಹಲ್ಲಿ ಕಾಟ ಅಂತ ಹೇಳಿ ಕೇವಲ 5 ದಿನಗಳಿಗೆ  ಮನೆ ತೊರೆದಿದ್ದಾರೆ..

ನಟಿ ವಿಜಯಲಕ್ಷ್ಮಿ ಕೆಲವು ದಿನಗಳ ಹಿಂದಷ್ಟೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿ ತಮಗೆ ಕೋವಿಡ್ ಆಗಿದೆ, ಐಸೋಲೇಷನ್ ಆಗಬೇಕು ಅಭಿಮಾನಿಗಳು ಯಾರಾದರೂ ನಮಗೆ ಮನೆ ಕೊಡಿ ಎಂದು ಮನವಿ ಮಾಡಿಕೊಂಡಿದ್ದರು. ವಿಡಿಯೋ ನೋಡಿದ ಹೊನ್ನಾವರದ ಯುವತಿಯೊಬ್ಬರು ವಿಜಯಲಕ್ಷ್ಮಿ ಅವರನ್ನು ಸಂಪರ್ಕ ಮಾಡಿ ಅವರ ಅಕ್ಕನನ್ನು ದಾಖಲಿಸಿದ್ದ ಆಸ್ಪತ್ರೆಯ ಬಿಲ್‌ ಅನ್ನೆಲ್ಲ ಭರಿಸಿ ಅವರನ್ನು ಕಾರಿನಲ್ಲಿ ಹೊನ್ನಾವರದ ಬಳಿಕ ಕರ್ಕಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ತಮ್ಮ ತಂದೆ, ಗ್ರಾಮ ಪಂಚಾಯಿತಿ ಸದಸ್ಯ ತುಕಾರಾಂ ನಾಯಕ್‌ ನೆರವಿನೊಂದಿಗೆ ಬಾಡಿಗೆ ಮನೆಯೊಂದನ್ನು ನೋಡಿ ಅದರಲ್ಲಿ ವಿಜಯಲಕ್ಷ್ಮಿ , ಅವರ ಅಕ್ಕ ಹಾಗೂ ತಾಯಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ವಿಜಯಲಕ್ಷ್ಮಿ ಕುಟುಂಬದ ಊಟದ ವ್ಯವಸ್ಥೆಯನ್ನು ತುಕಾರಾಂ ನಾಯಕ್‌ ಕುಟುಂಬದವರೇ ನೋಡಿಕೊಂಡಿದ್ದಾರೆ.

ಆ ಬಾಡಿಗೆ ಮನೆಯಲ್ಲಿ ಐದು ದಿನ ಇದ್ದ ವಿಜಯಲಕ್ಷ್ಮಿ ಮನೆಯ ಬಗ್ಗೆ ತಕರಾರು ತೆಗೆದಿದ್ದು, ಮನೆಯಲ್ಲಿ ಹಲ್ಲಿ ಇದೆ, ಜಿರಳೆ ಇದೆ ಎಂದು ಮನೆ ಬಿಟ್ಟು ಹೋಗಿದ್ದಾರೆ. ಎಲ್ಲಿಗೆ ಹೋಗುತ್ತೀರೆಂದು ಕೇಳಿದ್ದಕ್ಕೆ ತಾವು ವಿಜಯನಗರಕ್ಕೆ ಹೋಗುತ್ತಿರುವುದಾಗಿ ಹೇಳಿದ್ದಾರೆ. ವಿಜಯಲಕ್ಷ್ಮಿ ಕುಟುಂಬಕ್ಕೆ ತುಕಾರಾಂ ಅವರೇ ಬಾಡಿಗೆ ಕಾರು ಮಾಡಿ ಕೊಟ್ಟಿದ್ದಾರೆ.  ಅಷ್ಟೇ ಅಲ್ಲಲ ಸಹಾಯ ಮಾಡಿದ್ದನ್ನ ಮರೆತು ತುಕಾರಾಂ ಅವರ ಜೊತೆಗೆ ಜಗಳ ಮಾಡಿಕೊಂಡಿದ್ದಾರಂತೆ. ಬಳಿಕ ಈ ಬಗ್ಗೆ ವಿಡಿಯೋ ಮಾಡಿ ಮಾಹಿತಿ ನೀಡಿರುವ ತುಕಾರಾಂ ಮನೆಯಿಂದ ಹೋಗುವ ಮುನ್ನಾ ತಮ್ಮ ಜೊತೆಗೆ ಜಗಳ  ಆಡಿದ್ದಾರೆ ಎಂದಿದ್ದಾರೆ. ನನಗೆ ಸರಿಯಾದ ಮನೆ ಕೊಟ್ಟಿಲ್ಲ, ಮನೆ ಸರಿಯಾಗಿಲ್ಲ ಎಂದಿದ್ದಾರಂತೆ. ಅಲ್ಲದೆ ವಿಡಿಯೋ ಮಾಡಿ ನನಗೆ ಸರಿಯಾದ ಮನೆ ಕೊಟ್ಟಿಲ್ಲ, ಕನ್ನಡಿಗರು ನನಗೆ ನೋಡಿ ಎಂಥಹಾ ಮನೆ ಕೊಟ್ಟಿದ್ದಾರೆ ಮನೆಯಲ್ಲಿ ಹಲ್ಲಿ, ಜಿರಳೆಗಳೆಲ್ಲ ಇವೆ ಎಂದು ಹೇಳಿದ್ದಾರೆ ಎಂದು ತುಕಾರಾಂ ತಿಳಿಸಿದ್ದಾರೆ.

ಸ್ಟಾರ್ – ವಾರ್ : ಸಲಗ Vs ಕೋಟಿಗೊಬ್ಬ 3 / ಭಜರಂಗಿ 2 Vs ಪ್ರೇಮಂ ಪೂಜ್ಯಂ..!

Tags: #saakshatvSandalwoodvijayalakshmi
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram