ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

1 min read

ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

650 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ.  ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಅಲ್ಲದೇ ಕೆಲ ದಿನಗಳ ಹಿಂದೆ ಅವರಿಗೆ ಜಾಂಡೀಸ್ ಆಗಿತ್ತು. ಇದರ ಬೆನ್ನಲ್ಲೇ ಸತ್ಯಜೀತ್​ ಅವರಿಗೆ ಹಾರ್ಟ್ ಸ್ಟ್ರೋಕ್​ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಾಗಿ ನೆಗೆಟಿವ್ ರೋಲ್ ಗಳಲ್ಲಿಯೇ ಸತ್ಯಜಿತ್ ಬಣ್ಣ ಹಚ್ಚಿದ್ದಾರೆ.  ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಅನಾರೋಗ್ಯದ ಕಾರಣ 72 ವರ್ಷದ ಸತ್ಯಜಿತ್​ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಅಲ್ಲದೇ ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದ್ದು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅತ್ಯಜಿತ್ ಪುತ್ರ ಹೇಳಿದ್ದಾರೆ.

2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ನಟನೆ ಸೆಕೆಂಡ್​ ಹಾಫ್​  ನಲ್ಲಿ ಸತ್ಯಜಿತ್ ಅವರು ಕಡೆಯದಾಗಿ ಬಣ್ಣ ಹಚ್ಚಿದ್ದರು. ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ (ICU) ಸತ್ಯಜೀತ್ ಅವರಿಗೆ ಕೊಡಲಾಗುತ್ತಿದ್ದು, ರಕ್ತದೊತ್ತಡ, ಸಕ್ಕರೆ ಮಟ್ಟದಲ್ಲಿ ಏರುಪೇರಾಗುತ್ತಿದ್ದು, ಸರಿಯಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎನ್ನಲಾಗಿದೆ.

ಪಂಡೋರಾ ಪೇಪರ್ಸ್ ನಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೆಸರು..!

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd