ಆಂಧ್ರ ಪ್ರದೇಶದ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗುಡ್ ನ್ಯೂಸ್..!
7 – 12 ನೇ ತರಗತಿ ವರೆಗಿನ ವಿದ್ಯಾರ್ಥಿನಿಯರಿಗೆ ‘ಸ್ವೇಚ್ಛಾ’ ಯೋಜನೆಯಡಿ ಉಚಿತ ಸ್ಯಾನಿಟರಿ ನ್ಯಾಪ್ಕಿನ್ಸ್
10 ಲಕ್ಷ ವಿದ್ಯಾರ್ಥಿನಿಯರಿಗೆ ಯೋಜನೆಯ ಲಾಭ – ಪ್ರತಿ ತಿಂಗಳು ಪ್ರತಿ ಬಾಲಕಿಯರಿಗೆ 10 ನ್ಯಾಪ್ಕಿನ್ಸ್
ಸ್ವೇಚ್ಛಾ ಯೋಜನೆಯ ಅಡಿಯಲ್ಲಿ ಆಂಧ್ರ ಪ್ರದೇಶದ ಸರ್ಕಾರವು ವಿದ್ಯಾರ್ಥಿನಿಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ಒದಗಿಸುತ್ತಿದೆ. ಸ್ವೇಚ್ಛಾ ಯೋಜನೆಯಡಿ ಆಂಧ್ರಪ್ರದೇಶದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಮಧ್ಯಂತರ ಕಾಲೇಜುಗಳಲ್ಲಿ 7 ರಿಂದ 12 ನೇ ತರಗತಿಯ ವರೆಗಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 10 ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ನೀಡಲಾಗುತ್ತದೆ.
ಸುಮಾರು 10 ಲಕ್ಷ ವಿದ್ಯಾರ್ಥಿನಿಯರಿಗೆ ಈ ಯೋಜನೆಯ ಲಾಭ ಸಿಗಲಿದೆ. ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ( ಟೀನೇಜರ್ಸ್ ) ಆರೋಗ್ಯ ಮತ್ತು ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಈ ಕಾರ್ಯಕ್ರಮವನ್ನು ಆರಂಭಿಸಿದ್ದರು. ಈ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ಒದಗಿಸುತ್ತದೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಮಧ್ಯಂತರ ಕಾಲೇಜುಗಳಲ್ಲಿ 7 ರಿಂದ 12 ನೇ ತರಗತಿ ವರೆಗೂ ಓದುತ್ತಿರುವ ಸುಮಾರು 10 ಲಕ್ಷ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಹತ್ತು ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ನೀಡಲಾಗುತ್ತದೆ. ಇದಲ್ಲದೇ, ಕೈಗೆಟುಕುವ ದರದಲ್ಲಿ ಗುಣಮಟ್ಟದ ನ್ಯಾಪ್ಕಿನ್ಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಎಲ್ಲಾ ವೈಎಸ್ಆರ್ ಚೆಯುತಾ ಮಳಿಗೆಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.
ಪ್ರತಿ ಎರಡು ತಿಂಗಳಿಗೊಮ್ಮೆ, ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡುತ್ತಾರೆ ಮತ್ತು ರಾಜ್ಯಾದ್ಯಂತ 10,388 ಶಾಲೆ ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್ಗಳನ್ನು ವಿತರಿಸುತ್ತಾರೆ. ಇದರ ಜೊತೆಯಲ್ಲಿ, ಸರ್ಕಾರವು ಯುನಿಸೆಫ್, ವಾಶ್ ಮತ್ತು ಪಿ & ಜಿ ಜೊತೆ ಸಹಭಾಗಿತ್ವದಲ್ಲಿ ಮುಟ್ಟಿನ ಬಗ್ಗೆ ಮತ್ತು ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವದ ಕುರಿತು ವಿಶೇಷ ಜಾಗೃತಿ ತರಗತಿಗಳನ್ನು ನಡೆಸಲಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಹೇಳಲಾಗಿದೆ.