ಯಾದಗಿರಿ : ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ
ಯಾದಗಿರಿಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಅಣ್ಣನೇ ತನ್ನ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದು, ಯಾರಿಗಾದ್ರೂ ತಿಳಿಸಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಚಿಕ್ಕಪ್ಪನ ಮಗಳನ್ನ ಸೀತಾಫಲ ತರುವ ನೆಪದಲ್ಲಿ ಕರೆದುಕೊಂಡು ಹೋಗಿರುವ ಕಾಮುಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಶಹಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂತ್ರಸ್ತೆ ಸುರಪುರ ಜಿಲ್ಲೆಯ ನಿವಾಸಿ.
ಅದೇ ಗ್ರಾಮದಲ್ಲಿ ವಾಸವಾಗಿದ್ದ ಆಕೆಯ ದೊಡ್ಡಪ್ಪನ ಮಗ ಸಂತ್ರಸ್ತೆಯನ್ನು ತನ್ನ ಗ್ರಾಮದಿಂದ ಸುರಪುರದಲ್ಲಿನ ನಿರ್ಜನ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಬಳಿಕ ಜೀವ ಬೆದರಿಕೆಯೊಡ್ಡಿದ್ದಾನೆ. ಆದ್ರೆ ಈ ಬಗ್ಗೆ ಸಂತ್ರಸ್ತೆಯು ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ಬಳಿಕ ಆಕೆಯ ಕುಟುಂಬಸ್ಥರು ಈ ಸಂಬಂಧ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರು ಆರೋಪಿಯನ್ನ ಬಂಧಿಸಿ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.