ಪುರುಷರಿಗೂ ಸೇಫ್ಟಿ ಇಲ್ಲ…! ಯುವಕನ ಮೇಲೆ ಯುವಕನಿಂದಲೇ ಅತ್ಯಾಚಾರ
ಬೆಳಗಾವಿ : ಸಮಾಜದಲ್ಲಿ ಮಹಿಳೆಯರು ಒಬ್ಬಬ್ಬರೇ ಓಡಾಡಕೂ ಭಯ ಪಡುವಂತಹ ಸನ್ನಿವೇಷ ಎದುರಾಗುತ್ತಿದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ , ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚಾಗ್ತಾಯಿದ್ದು,, ಮಹಿಳೆಯರಿಗೆ ಸುರಕ್ಷಿತ ವಾತಾವರಣವಿಲ್ಲದಂತಹ ಪರಿಸ್ಥಿತಿ ಇದೆ. ಆದ್ರೆ ಕೇವಲ ಹುಡುಗಿಯರಷ್ಟೇ ಅಲ್ಲ ಹುಡುಗರಿಗೂ ಸೇಫ್ಟಿ ಇಲ್ಲ.. ಹೌದು ಇದಕ್ಕೆ ಸಾಕ್ಷಿ ಎಂಬಂತಹ ಘಟನೆಯೊಂದು ಬೆಳಗಾವಿಯ ಅಥಣಿಯಲ್ಲಿ ನಡೆದಿದೆ. ಯುವಕನೊಬ್ಬ ಮತ್ತೊಬ್ಬ ಯುವಕನ ಮೇಲೆ ಅತ್ಯಾಚಾರವೆಸಗಿದ್ದಾನೆ.
ಬಸ್ ಗಾಗಿ ಕಾಯುತ್ತಾ ನಿಂತಿದ್ದ ಯುವಕನ ಬಳಿಗೆ ಬಂದ ಬೈಕ್ ಸವಾರನೋರ್ವ ಡ್ರಾಪ್ ಕೊಡುವ ನೆಪದಲ್ಲಿ ಆತನನ್ನ ಕರೆದುಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಬೈಕ್ ಸವಾರ ಅಲ್ಲಿ ಮತ್ತೊಬ್ಬ ಯುವಕನ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿಯನ್ನ ರಾಜು ಅಚ್ಚಾರಟ್ಟಿ ಎಂದು ಗುರುತಿಸಲಾಗಿದೆ.
ಅತ್ಯಾಚಾರದ ಬಳಿಕ ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಯುವಕ ಪ್ರಕರಣ ದಾಖಲಿಸಿದ್ದಾನೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಪ್ರಿಯಾಂಕಾ ಗಾಂಧಿ ಕಸ ಗುಡಡಿಸುವುದಕ್ಕೆ ಲಾಯಕ್ಕು – ಯೋಗಿ ಆದಿತ್ಯನಾಥ್