ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

1 min read

ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮುಂಬೈ : ಪ್ರಸ್ತುತ ಮಹಿಳೆಯರಿಗೆ ಎಲ್ಲೂ ಕೂಡ ಸುರಕ್ಷತೆ ಇಲ್ಲದೆ ಇರುವಂತಹ ವಾತಾವರಣ ನಿರ್ಮಾಣವಾಗ್ತಿದೆ ಎಂದು ಹೇಳುವುದಕ್ಕೆ ದಿನೇ ದಿನೇ ಹೆಚ್ಚಾಗುತ್ತಿರುವ ಕಿರುಕುಳ ಪ್ರಕರಣಗಳು ಸಾಕ್ಷಿ.. ಅದ್ರಂತೆಯೇ ಮುಂಬೈನಲ್ಲಿ  ನಡೆದಿರುವ ಘಟನೆಯೊಂದು ಈ ರೀತಿಯಾಗಿ ಹೇಳೋದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ಚಲಿಸುತ್ತಿದ್ದ ರೈಲಿನಲ್ಲಿಯೇ ಯುವತಿ ಮೇಲೆ ಗೊಂಪೊಂದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಈ ಕೃತ್ಯ ನಡೆದಿದ್ದು, ಮುಂಬೈ ರೈಲ್ವೆ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.

ಲಕ್ನೋ- ಮುಂಬೈ ಮಾರ್ಗದ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ 20 ವರ್ಷದ ಯುವತಿ ಮೇಲೆ ದರೋಡೆಕೋರರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಹಾರಾಷ್ಟ್ರದ ಇಗತ್ಪುರಿ ಮತ್ತು ಕಾಸರ ರೈಲ್ವೆ ನಿಲ್ದಾಣಗಳ ನಡುವೆ ಈ ಅತ್ಯಾಚಾರ ನಡೆಸಲಾಗಿದ್ದು, ಯುವತಿ ನೀಡಿದ ದೂರಿನ ಆಧಾರದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ತಿಳಿಸಿರುವ ಮುಂಬೈ ಜಿಆರ್‌ಪಿಯ ಪೊಲೀಸ್ ಆಯುಕ್ತ ಕೈಸೆರ್ ಖಾಲಿದ್, ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲು ಘಾಟ್ ವಿಭಾಗದಲ್ಲಿ ಸಂಚರಿಸುವಾಗ ಯುವತಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ ಸ್ಲೀಪರ್ ಬೋಗಿ ಡಿ -2ನಲ್ಲಿ ಪ್ರಯಾಣಿಸುತ್ತಿದ್ದರು. ಘಾಟ್ ಪ್ರದೇಶದಲ್ಲಿ ರೈಲು ಚಲಿಸುತ್ತಿದ್ದಾಗ  ರಾತ್ರಿ ಈ ಕೃತ್ಯ ಎಸಗಿದ್ದಾರೆ.

ರೈಲು ಕಾಸರವನ್ನು ತಲುಪಿದಾಗ ಆ ಯುವತಿಯ ಸ್ಥಿತಿಯನ್ನು ನೋಡಿದ ಪ್ರಯಾಣಿಕರು ರೈಲ್ವೆ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಈ ಆರೋಪಿಗಳು ದರೋಡೆ ಮಾಡುವ ಉದ್ದೇಶದಿಂದ್ಲೇ ರೈಲಿನಲ್ಲಿ ಪ್ರಯಾಣಿಸಿದ್ದಾಗಿ ತಿಳಿದುಬಂದಿದೆ.  ಅಷ್ಟೇ ಅಲ್ದೇ ರೈಲು ಪ್ರಯಾಣಿಕರಿಂದ 96,390 ರೂ. ಮೌಲ್ಯದ ವಸ್ತುಗಳನ್ನು ಕದ್ದಿದ್ದಾಗಿ ತಿಳಿದುಬಂದಿದೆ.

ಪುರುಷರಿಗೂ ಸೇಫ್ಟಿ ಇಲ್ಲ…! ಯುವಕನ ಮೇಲೆ ಯುವಕನಿಂದಲೇ ಅತ್ಯಾಚಾರ  

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd