SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು : 2021 – 2021ನೇ ಸಾಲಿನ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಸೆಪ್ಟೆಂಬರ್ 27 ಹಾಗೂ 29 ರಂದು ನಡೆದಿದ್ದ ಪರೀಕ್ಷೆಗೆ ಒಟ್ಟು 59,155 ಮಂದಿ ಹಾಜರಾಗಿದ್ದರು.
ಈ ಪೈಕಿ ಶೇ 55.54ರಷ್ಟು ( 29,522) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 53,155 ವಿದ್ಯಾರ್ಥಿಗಳಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.55.54 ಫಲಿತಾಂಶ ದಾಖಲಾಗಿದೆ.
ಈ ಬಾರಿ 17,973 ಬಾಲಕಿಯರು ಪರೀಕ್ಷೆ ಬರೆದಿದ್ದರು. ಈ ಪೈಕಿ 10,290 ಜನ ಪಾಸ್ ಆಗಿದ್ದಾರೆ. 35,182 ಬಾಲಕರ ಪೈಕಿ 19, 232 ಜನ ಉತ್ತೀರ್ಣರಾಗಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬೆಳಗ್ಗೆ 10ಕ್ಕೆ ಫಲಿತಾಂಶ ಬಿಡುಗಡೆ ಮಾಡಿದರು.
https://sslc.karnataka.gov.in/ ವೆಬ್ಸೈಟ್ನಲ್ಲಿ ತಾತ್ಕಾಲಿಕ ಅಂಕಪಟ್ಟಿ ನೋಡಬಹುದು.
http://karresults.nic.in ನಲ್ಲಿ ಫಲಿತಾಂಶ ಲಭ್ಯವಿದೆ.