ಕೊರೊನಾ ಗೆದ್ದ 105 ವರ್ಷದ ವೃದ್ಧೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ.
ಸದ್ಯ ಸೋಂಕಿತರ ಸಂಖ್ಯೆ ಕಡಿಮೆಯಾದ್ರೂ ಸೋಂಕಿನಿಂದ ಮೃತಪಡುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ 105 ವರ್ಷದ ವೃದ್ಧೆಯೊಬ್ಬರು ಕೊರೊನಾ ವಿರುದ್ಧ ಗೆದ್ದಿದ್ದಾರೆ.
ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 105 ವರ್ಷದ ವೃದ್ಧೆಯೊಬ್ಬರು ಕೊರೊನಾದಿಂದ ವಾಸಿಯಾಗಿದ್ದಾರೆ.
105 ವರ್ಷದ ಲಕ್ಷ್ಮಮ್ಮ ಅಜ್ಜಿಗೆ ಕೊರೊನಾ ಸೋಂಕು ದೃಢವಾಗಿತ್ತು.
ಹೀಗಾಗಿ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ 12 ದಿನದಿಂದ ಚಿಕಿತ್ಸೆ ಪಡೆಯುತ್ತಾ ಇದ್ದ ಅಜ್ಜಿ ಇದೀಗ ಕೊರೊನ ವಾಸಿಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 2.22ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4,454 ಸೋಂಕಿತರು ಸಾವನ್ನಪ್ಪಿದ್ದಾರೆ.