ಹೆಚ್ಚುತ್ತಿರುವ ಡೇಂಗಿ ಜ್ವರ – ರಾಜ್ಯಗಳಿಗೆ ಕೇಂದ್ರದ ತಜ್ಞರ ಬೇಟಿ
ಕರೋನಾ ವೈರಸ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಹೊತ್ತಿನಲ್ಲಿ ದೇಶಕ್ಕೀಗ ಡೆಂಗಿ ಜ್ವರದ ಭಾಧೆ ಕಾಡುತ್ತಿದೆ. ದೇಶದಲ್ಲಿ ಡೆಂಗಿ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಕ್ರಮಗಳು ಮತ್ತು ಮಾರ್ಗದರ್ಶನವನ್ನು ನೀಡಿಲು ಕೇಂದ್ರ ಆರೋಗ್ಯ ಸಚಿವಾಲಯವು ತಜ್ಞರ ತಂಡಗಳನ್ನ ರಾಜ್ಯಗಳಿಗೆ ಕಳುಹಿಸಿದೆ.
ಹರಿಯಾಣ, ಪಂಜಾಬ್, ಕೇರಳ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ, ದೆಹಲಿ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಡೆಂಗಿ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ದೆಹಲಿಯಲ್ಲಿ ಡೆಂಗಿ ಪರಿಸ್ಥಿತಿ ಪರಿಶೀಲನೆ ಸಭೆ ಬಳಿಕ ರೋಗ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಹೆಚ್ಚಿನ ಪ್ರಕರಣಗಳಿರುವ ರಾಜ್ಯಗಳಿಗೆ ತಜ್ಞರ ತಂಡಗಳನ್ನು ಕಳುಹಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಈ ವರ್ಷ ಇಲ್ಲಿಯವರೆಗೆ 1,530 ಕ್ಕೂ ಹೆಚ್ಚು ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಸುಮಾರು 1,200 ಪ್ರಕರಣಗಳು ಅಕ್ಟೋಬರ್ನಲ್ಲೇ ದಾಖಲಾಗಿವೆ.