ಇಂದಿನಿಂದ ಅಂಗನವಾಡಿ ಕೇಂದ್ರ, LKG, UKG ಗಳು ಪ್ರಾರಂಭ

1 min read

ಇಂದಿನಿಂದ ಅಂಗನವಾಡಿ ಕೇಂದ್ರ, LKG, UKG ಗಳು ಪ್ರಾರಂಭ

ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ ಮಕ್ಕಳ ಕಲರವ ಕೇಳಿ ಬರಲಿದೆ. ಕೊರೊನಾ ಹಿನ್ನೆಲೆ 2020ರ ಮಾರ್ಚ್‌ನಿಂದ  ಮೊದಲ ಲಾಕ್‌ಡೌನ್‌ ವೇಳೆ ಮುಚ್ಚಿದಂತಹ  ಅಂಗನವಾಡಿ ಕೇಂದ್ರಗಳು ಹಾಗೂ ಯುಕೆಜಿ ಎಲ್ ಕೆ ಜಿ ತರಗತಿಗಳು ಸೋಮವಾರದಿಂದ ರಾಜ್ಯಾದ್ಯಂತ ಆರಂಭಗೊಳ್ಳುತ್ತಿವೆ.

ಲಾಕ್‌ಡೌನ್‌ ಮತ್ತು ನಂತರದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಹಾಗೂ ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸರಕಾರದ ಯೋಜನೆಗಳನ್ನು ತಲುಪಿಸುತ್ತಿದ್ದರು. ಆದರೆ ಮಕ್ಕಳು ಅಂಗನವಾಡಿ ಕೇಂದ್ರಗಳಿಗೆ ಬರುತ್ತಿರಲಿಲ್ಲ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿರುವ ಕಾರಣ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ.

ಮಾರ್ಗಸೂಚಿ ಕ್ರಮಗಳು

ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ತರಗತಿಗಳನ್ನು ಪ್ರಾರಂಭಿಸುವುದು.

ಶಾಲೆ ಪ್ರಾರಂಭಕ್ಕೂ ಮುನ್ನಾ, ಸ್ಯಾನಿಟೈಸ್ ಮಾಡುವುದು.

ಶಾಲೆಗಳಲ್ಲಿ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.

ಶಾಲೆಗೆ ಹಾಜರಾಗುವ ಎಲ್ಲಾ ಶಿಕ್ಷಕರು,

ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು.

ಶಿಕ್ಷಕರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.

ಮಕ್ಕಳಿಗೆ ಮನೆಯಿಂದಲೇ ಉಪಹಾರ, ಕುಡಿಯುವ ಶುದ್ಧನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು.

ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡುವುದು.

ವಾರದಲ್ಲಿ ಎರಡು ದಿನ ಮಕ್ಕಳಿಗೆ ರಜೆ ನೀಡಬೇಕು. ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ ಅವಧಿಗೆ ವೇಳಾಪಟ್ಟಿ ನಿಗಧಿ ಮಾಡಿಕೊಳ್ಳುವಂತೆ ಹೇಳಲಾಗಿದೆ. ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಕಂಡು ಬಂದಲ್ಲಿ ಶಾಲೆಯನ್ನು ಮುಚ್ಚಿ ಸ್ಯಾನಿಟೈಸ್ ಮಾಡಿ ಸ್ಥಳೀಯ ಆರೋಗ್ಯಾಧಿಕಾರಿಗಳ ಮಾರ್ಗದರ್ಶನದಂತೆ ಶಾಲೆ ಆರಂಭಿಸಬೇಕು.

 

 

 

 

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd