ರಾಜ್ಯ ಸರ್ಕಾರಿ ನೌಕರರು ಅನ್ಯ ಮೂಲದ ಆಸ್ತಿ ಘೋಷಣೆ ಮಾಡುವುದು ಕಡ್ಡಾಯ

1 min read

 

ರಾಜ್ಯ ಸರ್ಕಾರಿ ನೌಕರರು ಅನ್ಯ ಮೂಲದ ಆಸ್ತಿ ಘೋಷಣೆ ಮಾಡುವುದು ಕಡ್ಡಾಯ

ರಾಜ್ಯ ಸರಕಾರದ ವಿವಿಧ ಹುದ್ದೆಗಳಲ್ಲಿರುವ ಸರ್ಕಾರಿ ನೌಕರು ಸಕ್ರಮ ಪ್ರಾಧಿಕಾರಕ್ಕೆ ಸಲ್ಲಿಸದೆ ಖರೀದಿಸಿದ ಸ್ಥಿರಾಸ್ತಿ ಮತ್ತು ಚರಾಸ್ತಿಗಳ ಆದಾಯವನ್ನ ಘೋಷಣೆ ಮಾಡಿಕೊಳ್ಳಬೇಕು ಎಂದು ಸರಕಾರ ಸುತ್ತೋಲೆ ಹೊರಡಿಸಿದೆ.

ತಮ್ಮ ಮತ್ತು ತಮ್ಮ ಕುಟುಂಬದ ಮೂಲಕ ಯಾವುದೇ ಆಸ್ತಿಯನ್ನ ಸಕ್ರಮ ಪ್ರಾಧಿಕಾರಕ್ಕೆ ವರದಿಯನ್ನ ಸಲ್ಲಿಸದೆ ಬಂದ ಅನ್ಯ ಆದಾಯದ ಮೂಲಗಳನ್ನ ಎರಡು ತಿಂಗಳ ಒಳಗಾಗಿ ಸಲ್ಲಿಸಬೇಕು ಎಂದು ಸರಕಾರ ಖಡಕ್ ಆದೇಶ ನೀಡಿದೆ

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ ಪಾಟೀಲ್ ಅವರು ಸುತ್ತೋಲೆ ಹೊರಡಿಸಿದ್ದು, 2021ರ ನಿಯಮಗಳ ನಿಯಮ 24(3)ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ, ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೋರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗ್ಗೆ ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ ಎಂದು ಹೇಳಿದ್ದಾರೆ

 

 

 

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd