ಭಾರತದ 119 ಗಣ್ಯರಿಗೆ ಇಂದು ಪದ್ಮ ಪ್ರಶಸ್ತಿ ಪ್ರಧಾನ
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು, ಬಾಲಿವುಡ್ ನಟಿ ಕಂಗನಾ ರನಾವತ್, ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಮ್ (ಮರಣೋತ್ತರ) ಕರ್ನಾಟಕದ ಹರೇಕಾಳ ಹಾಜಬ್ಬ, ಪೇಜಾವರ ಶ್ರೀ (ಮರಣೋತ್ತರ) ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 119 ಮಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಸರ್ವೋನ್ನತ ಗೌರವ ಪದ್ಮ ಪ್ರಶಸ್ತಿಯನ್ನ ನೀಡಿ ಗೌರವಿಸಿದರು.
ಕೇಂದ್ರದ ಮಾಜಿ ಸಚಿವೆ ದಿ.ಸುಷ್ಮಾ ಸ್ವರಾಜ್, ದಿ.ಜಾರ್ಜ್ ಫರ್ನಾಂಡಿಸ್, ದಿ.ಅರುಣ್ ಜೇಟ್ಲಿ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕದ ನಾಲ್ವರು ಸಾಧಕರಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಅಕ್ಷರ ಸಂತ ಹರೇಕಳ ಹಾಜಬ್ಬು, ಪರಿಸರ ಪ್ರೇಮಿ ತುಳಸಿ ಗೋವಿಂದೇಗೌಡ, ಮಾಜಿ ಹಾಕಿ ಪಟು ಎಂಪಿ ಗಣೇಶ್ ಮತ್ತು ಉದ್ಯಮಿ ವಿಜಯ್ ಸಂಕೇಶ್ವರ್ ಅವರೂ ಕೂಡ ಪದ್ಮ ಶ್ರೀ ಪಶಸ್ತಿ ಪಡೆದರು.
ವೈದ್ಯಕೀಯ ವಿಭಾಗದಲ್ಲಿ ಡಾ.ಬೆಳ್ಳೆ ಮೋನಪ್ಪ ಹೆಗ್ಡೆ ಅವರಿಗೆ ಪದ್ಮ ವಿಭೂಷಣ, ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ಹಿರಿಯ ಸಾಹಿತಿ ಡಾ.ಚಂದ್ರಶೇಖರ್ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ.