ಬಸವನಗುಡಿ ಕಡಲೆಕಾಯಿ ಪರಿಷೆ ನಡೆಸಲು ಬಿಬಿಎಂಪಿ ಒಪ್ಪಿಗೆ

1 min read

ಬಸವನಗುಡಿ ಕಡಲೆಕಾಯಿ ಪರಿಷೆ ನಡೆಸಲು ಬಿಬಿಎಂಪಿ ಒಪ್ಪಿಗೆ

ಬೆಂಗಳೂರು ನಗರದ ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಅನುಮತಿ ನೀಡಿದೆ. ನವೆಂಬರ್ 29ರಿಂದ ಮೂರು ದಿನಗಳ ಕಾಲ ಪರಿಷೆ ನಡೆಯಲಿದೆ. ಕೋವಿಡ್ ಮಾರ್ಗಸೂಚಿ ಅನ್ವಯ ಪರಿಷೆ ನಡೆಸಲು ಸೂಚನೆ ನೀಡಲಾಗಿದೆ.. ಕಳೆದ ವರ್ಷ ಕೋವಿಡ್  ಕಾರಣದಿಂದಾಗಿ  ದೇವಸ್ಥಾನದ ಆವರಣದಲ್ಲಿ ಮಾತ್ರ ನಡೆಸಲು ಅನುಮತಿ ನೀಡಲಾಗಿತ್ತು.

ಇತಿಹಾಸ:

ಬೆಂಗಳೂರು ಗಾತ್ರದಲ್ಲಿ ಬೆಳೆದು ಮಹಾ ನಗರವಾಗುವ ಮೊದಲು, ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಪ್ರತಿ ವರ್ಷ ನೆಲಗಡಲೆ (ಶೇಂಗಾ) ಬೆಳೆಯುತ್ತಿದ್ದರು. ಆದರೆ ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲ ಗದ್ದೆಗೆ ದಾಳಿ ಇಡುತ್ತಿದ್ದ ಬಸವವೊಂದು ನಾಶಪಡಿಸುತ್ತಿತ್ತು. ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಿ ಬಸವ (ನಂದಿ)ನನ್ನ ಪ್ರಾರ್ಥಿಸಲು ಆರಂಭಿಸಿದರು. ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು ಮತ್ತು ಈ ಸ್ಥಳದಲ್ಲಿ ಕೆಂಪೇಗೌಡರು 16 ನೇಶತಮಾನದಲ್ಲಿ ನಂದಿಯ ಸುತ್ತಲೂ ದೇವಾಲಯವನ್ನು ನಿರ್ಮಿಸಿದರು. ಇದನ್ನು ಬಸವನ ಗುಡಿ ಅಥವಾ ಬಿಗ್ ಬುಲ್ ಟೆಂಪಲ್ ಎಂದು ಕರೆಯಲಾಗುತ್ತದೆ

ಕಡಲೆಕಾಯಿ ಪರಿಷೆ  ಸಮಯದಲ್ಲಿ ಗ್ರಾಹಕರು ನೆಲಗಡಲೆಗಳನ್ನು ರೈತರಿಂದ ನೇರವಾಗಿ ಮಾರುಕಟ್ಟೆ ದರಕ್ಕಿಂತ ಅಗ್ಗವಾಗಿ ಖರೀದಿಸುತ್ತಾರೆ. ಅಲಂಕೃತ ಬೀದಿಗಳಲ್ಲಿ ಸಾಕಷ್ಟು ಶಾಪಿಂಗ್ ಆಯ್ಕೆಗಳು, ಆಹಾರ ಮಳಿಗೆಗಳು, ಆಟಗಳು ಮತ್ತು ಮಕ್ಕಳಿಗೆ ಆಟಿಕೆಗಳು ಇರುತ್ತವೆ.

ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿ ಕಡಲೆ ಕೈ ಪರಿಷೆ ನಡೆಯುತ್ತದೆ. ಇದು ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬರುತ್ತದೆ

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd