ಕರ್ನಾಟಕದಲ್ಲಿ ಬಿಟ್ ಕಾಯಿನ್ ಹಗರಣ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ಹಗರಣ ವಿರೋಧ ಪಕ್ಷದವರಿಗೆ ಬ್ರಹ್ಮಾಸ್ತ್ರ ಸಿಕ್ಕಂತಾಗಿದ್ದು. ಆಡಳಿತ ಪಕ್ಷವನ್ನ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ.
ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಈ ದೆಹಲಿ ಭೇಟಿಯು ಬಿಟ್ಕಾಯಿನ್ ಕ್ರಿಪ್ಟೋಕರೆನ್ಸಿ ಹಗರಣಕ್ಕೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ. ಬಂಧನಕ್ಕೊಳಗಾಗಿರುವ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯನ್ನು ಬಳಸಿಕೊಂಡು ಸಚಿವರು, ಬಿಜೆಪಿ ನಾಯಕರು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ ಹೈ-ಪ್ರೊಫೈಲ್ ಹೆಸರುಗಳು ಬಿಟ್ಕಾಯಿನ್ ಮೂಲಕ ಮನಿ ಲಾಂಡರಿಂಗ್ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.
ಇತ್ತೀಚೆಗಷ್ಟೇ 100 ದಿನಗಳನ್ನು ಪೂರೈಸಿರುವ ಬೊಮ್ಮಾಯಿ, ರಾಜ್ಯದ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.
ಮುಂದಿನ 48 ಗಂಟೆ ಮತ್ತಷ್ಟು ಚುರುಕಾಗಲಿದೆ ಮಳೆ
ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು