ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ 11 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 226ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮೂರು, ಬೆಳಗಾವಿಯಲ್ಲಿ ನಾಲ್ಕು, ಕಲ್ಬುರ್ಗಿಯಲ್ಲಿ ಎರಡು, ಮೈಸೂರು, ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
ಜಿಲ್ಲಾವಾರು ಸೋಂಕಿತರ ಮಾಹಿತಿ ಹೀಗಿದೆ:
ಬೆಂಗಳೂರು ನಗರ 76, ಮೈಸೂರು 48, ದಕ್ಷಿಣ ಕನ್ನಡ, ಕಲ್ಬುರ್ಗಿ 12, ಉತ್ತರ ಕನ್ನಡ, ಚಿಕ್ಕಬಳ್ಳಾಪುರದಲ್ಲಿ ತಲಾ 9, ಬಳ್ಳಾರಿಯಲ್ಲಿ 6, ದಾವಣಗೆರೆ, ಉಡುಪಿಯಲ್ಲಿ ತಲಾ 3, ಧಾರವಾಡದಲ್ಲಿ 2, ಬೀದರ್ ನಲ್ಲಿ 11, ಬೆಂಗಳೂರು ಗ್ರಾಮಾಂತರದಲ್ಲಿ 4, ಮಂಡ್ಯದಲ್ಲಿ 5 ಮಂದಿ ಸೋಂಕಿತರಿದ್ದಾರೆ.








