ಹಾಸನ: ಹೃದಯಾಘಾತದಿಂದಾಗಿ (Heart Attack) 11 ವರ್ಷದ ಬಾಲಕ ಸಾವನ್ನಪ್ಪಿರುವ (Death) ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಸಚಿನ್ ಸಾವನ್ನಪ್ಪಿದ ದುರ್ದೈವ ವಿದ್ಯಾರ್ಥಿ ಎನ್ನಲಾಗಿದೆ.
ವಿದ್ಯಾರ್ಥಿಯು ಎದೆ ನೋವಿನಿಂದಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಇದ್ದ. ಹೀಗಾಗಿ ಮನೆಯಲ್ಲಿ ಕುಳಿತು ಟಿವಿ ನೋಡುತ್ತಿದ್ದ. ಆದರೆ, ಈ ವೇಳೆ ಏಕಾಎಕಿ ಹೃದಯಾಘಾತವಾಗಿದೆ ಎನ್ನಲಾಗಿದೆ.
ಮಲಗಿದ್ದ ಮಗನನ್ನು ಮಾತನಾಡಿಸಲು ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಿಲ್ಲ. ಎಚ್ಚರವೂ ಆಗಿಲ್ಲ. ಗಾಬರಿಗೊಂಡು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಮಗ ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಚಿಕ್ಕವಯಸ್ಸಿನಲ್ಲೇ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿಕೊಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.