ಯೂಟ್ಯೂಬ್‌ನಿಂದ ಹ್ಯಾಕಿಂಗ್ ಸುಳಿವು ಕಲಿತು ತಂದೆಗೆ 10 ಕೋಟಿ ರೂ.ಗಳ ಬೇಡಿಕೆ ಇಟ್ಟ 11 ವರ್ಷದ ಮಗ
ಘಜಿಯಾಬಾದ್, ಜನವರಿ29: ಯೂಟ್ಯೂಬ್‌ನಿಂದ ಹ್ಯಾಕಿಂಗ್ ಸುಳಿವುಗಳನ್ನು ಕಲಿತ ಬಾಲಕನೊಬ್ಬ ತನ್ನ ತಂದೆಗೆ ಇಮೇಲ್ ಮುಖಾಂತರ 10 ಕೋಟಿ ರೂ.ಗಳ ಬೇಡಿಕೆ ಇರಿಸಿದ ಆಘಾತಕಾರಿ ಘಟನೆಯೊಂದು ಘಜಿಯಾಬಾದ್ ನಲ್ಲಿ ನಡೆದಿದೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
11 ವರ್ಷದ ಬಾಲಕ ತನ್ನ ತಂದೆಗೆ ಇಮೇಲ್ ಮಾಡಿ 10 ಕೋಟಿ ರೂ.ಗಳ ಬೇಡಿಕೆ ಇರಿಸಿದ್ದು, ತಪ್ಪಿದರೆ ಕುಟುಂಬದ ವೈಯಕ್ತಿಕ ವಿವರಗಳನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾನೆ.
ವರದಿಗಳ ಪ್ರಕಾರ, ಘಜಿಯಾಬಾದ್ ನಿವಾಸಿ 10 ಕೋಟಿ ರೂ.ಗಳ ಬೇಡಿಕೆಯ ಕರೆ ಬಂದ ನಂತರ ಪೊಲೀಸರನ್ನು ಸಂಪರ್ಕಿಸಿದ್ದು, ನಂತರ ಈ ಘಟನೆ ಬೆಳಕಿಗೆ ಬಂದಿದೆ.
ತನ್ನ ಇಮೇಲ್ ಖಾತೆಯನ್ನು ಹ್ಯಾಕ್ ಮಾಡಿದ ಹ್ಯಾಕರ್‌ಗಳ ಗುಂಪು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅವರ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡುವುದಾಗಿ ಎಚ್ಚರಿಸಿದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.
ಜನವರಿ 1 ರಂದು ತನ್ನ ಇಮೇಲ್ ಐಡಿಯನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿದ್ದಾರೆ ಎಂದು ಹೇಳಿಕೊಂಡ ವ್ಯಕ್ತಿಯು, ಸಂಖ್ಯೆಯನ್ನು ಮರುಹೊಂದಿಸುವ ಮೂಲಕ ಹ್ಯಾಕರ್‌ಗಳು ತಮ್ಮ ಇಮೇಲ್ ಐಡಿಯ ಪಾಸ್‌ವರ್ಡ್ ಮತ್ತು ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದ್ದಾರೆ ಎಂದು ಹೇಳಿದರು. ನಂತರ ಅವರು ಮೇಲ್ ಸ್ವೀಕರಿಸಿದ್ದು, 10 ಕೋಟಿ ರೂಪಾಯಿಗಳ ಭಾರಿ ಮೊತ್ತವನ್ನು ಪಾವತಿಸಲು ಕೇಳಲಾಯಿತು. ಅಷ್ಟೇ ಅಲ್ಲ, ಹ್ಯಾಕರ್‌ಗಳು ತಮ್ಮ ಕುಟುಂಬಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಕೂಡ ಅವರು ಆರೋಪಿಸಿದರು.
ಭಾರತೀಯ ಲಸಿಕೆ ಬಗ್ಗೆ ಯಾವುದೇ ಆಸಕ್ತಿ ತೋರಿಸದ ಪಾಕಿಸ್ತಾನ – ಏನಿದರ ಹಿಂದಿನ ಗುಟ್ಟು?
ಪೊಲೀಸರು ತಮ್ಮ ತನಿಖೆಯನ್ನು ಪ್ರಾರಂಭಿಸಿದಾಗ, ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿತು. ತನಿಖೆಯಲ್ಲಿ ಐಪಿ ವಿಳಾಸವು ದೂರುದಾರರ ಮನೆಯದ್ದಾಗಿದೆ ಎಂದು ತಿಳಿದುಬಂದಿದೆ. ಹಾಗಾಗಿ ಬೆದರಿಕೆ ಇಮೇಲ್ ಅನ್ನು ಅವರ ಕುಟುಂಬದ ಸದಸ್ಯರಲ್ಲೇ ಒಬ್ಬರು ಕಳುಹಿಸಿದ್ದಾರೆ ಎಂದು ಪೊಲೀಸರಿಗೆ ಸ್ಪಷ್ಟವಾಯಿತು ನಿರ್ಣಾಯಕ ಸುಳಿವು ಪಡೆದ ಪೊಲೀಸರು ಕುಟುಂಬ ಸದಸ್ಯರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದರು. ಈ ಸಮಯದಲ್ಲಿ ದೂರುದಾರರ 11 ವರ್ಷದ ಮಗ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.
5 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಅಪ್ರಾಪ್ತ ಬಾಲಕ ಸೈಬರ್ ಅಪರಾಧದ ಬಗ್ಗೆ ಮತ್ತು ಆನ್‌ಲೈನ್‌ನಲ್ಲಿ ಸಿಕ್ಕಿಹಾಕಿಕೊಳ್ಳುವುದನ್ನು ತಪ್ಪಿಸುವುದು ಹೇಗೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಅವನು ಹ್ಯಾಕಿಂಗ್ ಕೌಶಲ್ಯವನ್ನು ಕರಗತ ಮಾಡಿಕೊಳ್ಳಲು ಸಾಕಷ್ಟು ಯೂಟ್ಯೂಬ್ ವೀಡಿಯೊಗಳನ್ನು ವೀಕ್ಷಿಸಿದ್ದು, ಅಂತಿಮವಾಗಿ ಬೇಡಿಕೆಯ ಇಮೇಲ್ ಅನ್ನು ತಮ್ಮ ತಂದೆಗೆ ಕಳುಹಿಸಿದ್ದಾನೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
ನಂತರ ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಮಾಡಿದ ಅವಮಾನ ಮತ್ತು ಗಾಜಿಯಾಬಾದ್‌ನಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66 ಡಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
ಸಪೋಟಾ ಅಥವಾ ಚಿಕ್ಕು ಸೇವಿಸುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು https://t.co/w7hHvhnqcW
— Saaksha TV (@SaakshaTv) January 28, 2021
ಭಾರತದ ಕೋವಿಡ್ ಲಸಿಕೆಯ ಯಶಸ್ಸನ್ನು ಸಹಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಚೀನಾ !https://t.co/rJ0utA58CE
— Saaksha TV (@SaakshaTv) January 28, 2021