ಚಿತ್ರದುರ್ಗ ಜಿಲ್ಲೆಯಲ್ಲಿ ಪಕ್ಕದ ಮನೆಯ ಗೆಳತಿ ಸೈಕಲ್ ನೀಡಿಲ್ಲ ಎಂಬ ಕಾರಣಕ್ಕೆ, 11 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡರು ಘಟನೆ ನಡೆದಿದೆ. ಈ ಹೃದಯವಿದ್ರಾವಕ ಘಟನೆ ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೋಪಾಲ ಮತ್ತು ರುದ್ರಮ್ಮ ದಂಪತಿಯ ಮಗಳು ಸ್ಪಂದನಾ, ಪ್ರತಿದಿನ ಪಕ್ಕದ ಮನೆ ಗೆಳತಿಯ ಜೊತೆ ಸೈಕಲ್ ಆಡಿ ಕಾಲ ಕಳೆಯುತ್ತಿದ್ದಳು. ಆದರೆ, ಆ ದಿನ ಗೆಳತಿ ಸೈಕಲ್ ಕೊಡದಿರುವುದರಿಂದ ಮನಸ್ಸಿಗೆ ನೋವಾಗಿದೆ. ಯಾರಿಗೂ ಏನೂ ಹೇಳದೇ, ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು, ಸ್ಪಂದನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಾಲಕಿ ರೂಮ್ ಬಾಗಿಲು ತೆರೆಯದಿರುವುದನ್ನು ಗಮನಿಸಿದ ಪೋಷಕರು ಕೊಠಡಿಯ ಬಾಗಿಲು ಒಡೆದು ನೋಡಿದಾಗ ಈ ದೃಶ್ಯ ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು. ಈ ದುರ್ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
![{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false,"used_sources":{"version":1,"sources":[{"id":"435250766003211","type":"ugc"},{"id":"289170894054211","type":"ugc"},{"id":"454202938023211","type":"ugc"},{"id":"240045996045212","type":"ugc"},{"id":"431967082027201","type":"ugc"},{"id":"439524696001211","type":"ugc"},{"id":"441845485021211","type":"ugc"}]}}](https://saakshatv.com/wp-content/uploads/2025/04/Picsart_25-04-25_19-20-30-828-750x500.jpg)







