ಸತ್ತ ವ್ಯಕ್ತಿ 7 ಗಂಟೆಗಳ ನಂತರ ಎದ್ದು ಕೂತಾಗ…..!!!
ವ್ಯಕ್ತಿ ಸತ್ತಿದ್ದಾನೆ ಎಂದು ತಿಳಿದು ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ 7 ಗಂಟೆಗಳ ತರುವಾಯ ಎದ್ದು ಕೂತಿರುವ ಸಿನಿಮೀಯಾ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಶ್ರೀಕೇಶ್ ಕುಮಾರ್ ಎಂಬ ವ್ಯಕ್ತಿ ಬೈಕಿನಲ್ಲಿ ವೇಗವಾಗಿ ತೆರಳುತ್ತಿದ್ದಾಗ ಆಕ್ಸಿಡೆಂಟ್ ಮಾಡಿಕೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸಿದಾಗ ಪರೀಕ್ಷಿಸಿದ ವೈದ್ಯರು ವ್ಯಕ್ತಿ ಸತ್ತಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಆತನ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸಿದ ಅಲ್ಲಿನ ಸಿಬ್ಬಂದಿ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಆತನ ಮನೆಯವರು ಆಸ್ಪತ್ರೆಗೆ ಬಂದು ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದ ಹುಡುಗಿಯೊಬ್ಬಳು ಮೃತದೇಹದಲ್ಲಿ ಚಲನೆಯನ್ನು ಗುರುತಿಸಿದ್ದಾಳೆ. ನಂತರ ಆತ ಜೀವದಿಂದ ಇರುವುದು ಪತ್ತೆಯಾಗಿತ್ತು. ಸೂಕ್ತ ಚಿಕಿತ್ಸೆಯ ನಂತರ ಆತ ಎದ್ದು ಕೂತಿದ್ದಾನೆ.
ಆತನ ದೇಹವನ್ನು ತಂದಾಗ ಆಸ್ಪತ್ರೆಯಲ್ಲಿ ಹಾಜರಿದ್ದ ಮೆಡಿಕಲ್ ಆಫೀಸರ್ ದೇಹವನ್ನ ತಪಾಸಣೆ ನಡೆಸಿದಾಗ ಹೃದಯ ಬಡಿತ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.