ರಾಜ್ಯದಲ್ಲಿ ಕರೋನಾ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿಲ್ಲ – ಸಿ ಎಂ ಸ್ಪಷ್ಟನೆ
ರಾಜ್ಯದಲ್ಲಿ ಓಮಿಕ್ರಾನ್ ಹೊಸ ಕೋವಿಡ್ ವೇರಿಯಂಟ್ ಸೋಂಕು ಪತ್ತೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಮುನ್ನೇಚ್ಚರಿಕೆಯ ಕ್ರಮವಾಗಿ ಕೆಂಪೇಗೌಡ ಇಂಟರ್‌ನ್ಯಾಷನಲ್ ಏರ್ಪೋರ್ಟ್‌ನಲ್ಲಿ ಕಟ್ಟೆಚ್ಚರ ವಹಿಸಲಾಗಿದು ವಿದೇಶದಿಂದ ಬಂದ ಎಲ್ಲರನ್ನು ತಪಾಸಣೆಗೆ ಒಳಪಡಿಸಿ, ನೆಗೆಟೀವ್ ವರದಿ ಬಂದರಷ್ಟೆ ಹೊರ ಬರಲು ಅವಕಾಶ ಮಾಡಿಕೊಡಲಾಗುತ್ತಿದೆ.
ಇಲ್ಲದಿದ್ದರೆ ನೆಗಟೀವ್ ವರದಿ ಬರುವವರೆಗೂ ವಿಮಾನ ನಿಲ್ದಾಣದಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಎಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ ಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದು ಕಟ್ಟುನಿಟ್ಟಿನ ಕೋವಿಡ್ ಕ್ರಮಗಳನ್ನ ಪಾಲಿಸಲು ಜಿಲ್ಲಾಧಿಕಾರಗಳಿಗೆ ಸೂಚಿಸಲಾಗಿದೆ. ಧಾರವಾಡದ ಎಸ್ ಡಿ ಎಂ ಕಾಲೇಜಿನಲ್ಲಿ ಕೋವಿಡ್ ಸ್ಪೋಟಗೊಂಡಿರುವ ಬಗ್ಗೆ ಮಾತನಾಡಿ ಸಧ್ಯಕ್ಕೆ ಎಸ್ ಡಿ ಎಂ ಆಸ್ಪತ್ರೆಯ ಓಪಿಡಿಯನ್ನ ಬಂದ್ ಮಾಡಲಾಗಿದ್ದು ಎಲ್ಲಾ ರೀತಿಯ ಮುನ್ನೆಚ್ಚೆರಿಕೆ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.