ಪುಲ್ವಾಮದಲ್ಲಿ ಇಬ್ಬರು ಜೈಶ್ ಉಗ್ರರನ್ನ ಹೊಡೆದುರುಳಿಸಿದ ಸೇನೆ
ಬುಧವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನ ಹೊಡೆದುರುಳಿಸಲಾಗಿದೆ.
ಕಸ್ಬಾ ಯಾರ್ ಪ್ರದೇಶದಲ್ಲಿ ಮುಂಜಾನೆ ಆರಂಭವಾದ ಗುಂಡಿನ ಚಕಮಕಿಯಲ್ಲಿ ಜೆಇಎಂ ಕಮಾಂಡರ್ ಯಾಸಿರ್ ಪರ್ರೆ ಮತ್ತು ಫುರ್ಕಾನ್ ಎಂದು ಗುರುತಿಸಲಾದ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಸುದ್ದಿ ಸಂಸ್ಥಗಳಿಗೆ ತಿಳಿಸಿದ್ದಾರೆ.
ಭಯೋತ್ಪಾದಕರು ಅಡಗಿಕೊಂಡಿರುವ ಬಗ್ಗೆ ನಿಖರ ಮಾಹಿತಿ ಕಲೆ ಹಾಕಿದ ಪೊಲೀಸರು, ಮಿಲಿಟರಿ ಮತ್ತು ಸಿಆರ್‌ಪಿಎಫ್ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನ ಹೆಡಮುರಿ ಕಟ್ಟಲಾಗಿದೆ.
ಜೈಷ್-ಇ-ಮೊಹಮದ್ ಉಗ್ರಗಾಮಿ ಸಂಘಟನೆಯ ಐಇಡಿ ಪರಿಣಿತನಾದ ಯಾಸಿರ್ ಪರ್ರೆ ಕೇಂದ್ರಾಡಳಿತ ಪ್ರದೇಶದಲ್ಲಿ ಹಲವಾರು ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ. ಉಗ್ರರಿಂದ ಹಲವು ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ.