ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಹಿರಿಯ ನಟ ಶಿವರಾಂ ಆರೋಗ್ಯ
ಬೆಂಗಳೂರು : ಹಿರಿಯ ಕಲಾವಿದ ಶಿವರಾಂ ಅವರ ಆರೋಗ್ಯ ಕ್ಷಣ ಕ್ಷಣಕ್ಕೆ ಕ್ಷಿಣಿಸುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮೆದುಳಿನ ರಕ್ತಸ್ರಾವದಿಂದ ನಗರದ ಬ್ಯಾಂಕ್ ಕಾಲೋನಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಶಿವರಾಂ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಶಿವರಾಂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ ಮೆದುಳಿನ ರಕ್ತಸ್ರಾವದಿಂದ ಈಗಾಗಲೇ ಅವರು ಕೋಮಾ ಸ್ಥಿತಿ ತಲುಪಿದ್ದಾರೆ. ಅವರ ಆರೋಗ್ಯದ ವಿಚಾರದಲ್ಲಿ ಮಿರಾಕಲ್ ಆಗಬೇಕು’ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಚಂದನವನದ ಅನೇಕ ಹಿರಿಯ ನಟ-ನಟಿಯರು ಬಂದು ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಆದರೆ ಇದು ಅವರ ಕುಟುಂಬದವರು, ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
‘ಶಿವರಾಂ ಅವರು ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಲು ಟೆರೆಸ್ನಲ್ಲಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಲ್ಲಿಗೆ ತೆರಳಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು. ಒಂದೂವರೆ ಗಂಟೆ ಬಳಿಕ ಅದು ತಿಳಿದುಬಂದಿದೆ. ಅವರ ಮಗ ಮತ್ತು ಮೊಮ್ಮಗಳು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಎಂಆರ್ಐ ಸ್ಕ್ಯಾನ್ ಮಾಡಿದಾಗ ತಲೆ ಒಳ ಭಾಗಕ್ಕೆ ಪೆಟ್ಟು ಬಿದ್ದಿರುವುದಾಗಿ ತಿಳಿದಿದೆ.
ಕನ್ನಡದ ನೂರಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಶಿವರಾಂ ನಟಿಸಿದ್ದಾರೆ, ಡಾ. ರಾಜ್ಕುಮಾರ್ ವಿಷ್ಣುವರ್ಧನ್ ಅಂಬರೀಶ್ ಸೇರಿದಂತೆ ಹಿರಿಯ ಕಲಾವಿದರ ಜೊತೆ ಹಲವು ಚಿತ್ರಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. ಅಷ್ಟೆ ಅಲ್ಲದೆ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ.








