ವಿಧಾನಪರಿಷತ್ ಫೈಟ್ – ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು
ಹಾಸನದಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. 20 ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಸಂಜೆಯ ವೇಳೆಗೆ ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.
ಹಾಸನದಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ.ಸೂರಜ್ ರೇವಣ್ಣ ಅವರಿಗೆ ಒಟ್ಟು 2281 ಮತಗಳು ಬಿದ್ದಿದ್ದು, 1533 ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ಗೆ 748 ಮತಗಳು, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್ ಗೆ 421 ಮತಗಳು, ಪಕ್ಷೇತರ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರಿಗೆ 18 ಮತಗಳು, ಪಡೆದುಕೊಂಡಿದ್ದಾರೆ…
ಸೂರಜ್ ರೇವಣ್ಣ ಭರ್ಜರಿ ಗೆಲುವು ಹಿನ್ನಲೆಯಲ್ಲಿ ಸಾವಿರಾರು ಕಾರ್ಯಕರ್ತರಿಂದ ಹಾಸನ ನಗರದ ಡೈರಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಗುತ್ತಿದೆ.