1971 ರ ಯುದ್ಧದ 50 ನೇ ವಾರ್ಷಿಕೋತ್ಸವ, ಹುತಾತ್ಮರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…
1971 ರ ಬಾಂಗ್ಲ ವಿಮೋಚನಾ ಯುದ್ಧ ಗೆದ್ದ ಸ್ಮರಣೆಗಾಗಿ ಪ್ರಧಾನಿ ಮೋದಿ ಇಂದು ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ತೆರಳಿ, ಯುದ್ಧದಲ್ಲಿ ಮಡಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು, ಸುವರ್ಣ ವಿಜಯ ದಿವಸ್ ಸಮಾರಂಭದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ, ಪ್ರಧಾನಿಯವರು ಯುದ್ಧ ಸ್ಮಾರಕದಲ್ಲಿ ಅಮರ್ ಜವಾನ್ ಜ್ಯೋತಿ ಬೆಳಗಿಸಿದರು. ಮತ್ತು ಯುದ್ಧ ಸ್ಮಾರಕಕ್ಕೆ ಪುಷ್ಪ ಸಮರ್ಪಣೆ ಮಾಡಿದರು.
50 ನೇ ವಿಜಯ್ ದಿವಸ್‌ನಲ್ಲಿ, ನಾನು ಸ್ವಾತಂತ್ರ್ಯ ಹೋರಾಟಗಾರರು, ವೀರಯೋಧರು ಮತ್ತು ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗವನ್ನು ನೆನಪಿಸಿಕೊಳ್ಳುತ್ತೇನೆ. ನಾವು ಒಟ್ಟಾಗಿ ದಮನಕಾರಿ ಶಕ್ತಿಗಳ ವಿರುದ್ಧ ಹೋರಾಡಿ ಅವರನ್ನು ಸೋಲಿಸಿದ್ದೇವೆ. ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ..
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬಾಂಗ್ಲಾದೇಶದಲ್ಲಿ ರಾಷ್ಟ್ರೀಯ ವಿಜಯ ದಿವಸ್ ಕಾರ್ಯಕ್ರಮದ ಪ್ರಯುಕ್ತ 3 ದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿದ್ದಾರೆ.
ಸ್ವರ್ಣೀಂ ವಿಜಯ್ ದಿವಸ್ ಸಂದರ್ಭದಲ್ಲಿ ನಾವು 1971 ರ ಯುದ್ಧದ ಸಮಯದಲ್ಲಿ ನಮ್ಮ ಸಶಸ್ತ್ರ ಪಡೆಗಳ ಧೈರ್ಯ ಮತ್ತು ತ್ಯಾಗವನ್ನು ನೆನಪಿಸಿಕೊಳ್ಳುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 1971 ರ ಯುದ್ಧವು ಭಾರತದ ಮಿಲಿಟರಿ ಇತಿಹಾಸದಲ್ಲಿ ಒಂದು ಸುವರ್ಣ ಅಧ್ಯಾಯವಾಗಿದೆ. ನಮ್ಮ ಸಶಸ್ತ್ರ ಪಡೆಗಳು ಮತ್ತು ಅವರ ಸಾಧನೆಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ. ಎಂದು ತಿಳಿಸಿದರು.
16 ಡಿಸೆಂಬರ್ 1971 ರಂದು ಬಾಂಗ್ಲಾದೇಶ ಭಾರತದಿಂದ ಸ್ವಾತಂತ್ರ್ಯ ಪಡೆಯಿತು. ಮೊದಲು ಈ ದೇಶವು ಪಾಕಿಸ್ತಾನದ ಭಾಗವಾಗಿತ್ತು ಮತ್ತು ಇದನ್ನು ಪೂರ್ವ ಪಾಕಿಸ್ತಾನ ಎಂದು ಕರೆಯಲಾಗುತ್ತಿತ್ತು. ಪಾಕಿಸ್ತಾನಿ ಸೇನೆಯನ್ನ ಬಗ್ಗು ಬಡಿದು ಭಾರತ ವಿಜಯ ಸಾಧಿಸಿತ್ತು. ಮತ್ತು ಬಾಂಗ್ಲಾದೇಶದ ರಚನೆಗೆ ಕಾರಣವಾಗಿತ್ತು. , ಪ್ರತಿ ವರ್ಷ ಡಿಸೆಂಬರ್ 16 ಅನ್ನು ಭಾರತ ಮತ್ತು ಬಾಂಗ್ಲಾದೇಶದಲ್ಲಿ ವಿಜಯ ದಿನವನ್ನಾಗಿ ಆಚರಿಸಲಾಗುತ್ತದೆ.
ಈ ಯುದ್ಧದ ಕೊನೆಯಲ್ಲಿ 93,000 ಪಾಕಿಸ್ತಾನಿ ಸೈನಿಕರು ಭಾರತಕ್ಕೆ ಶರಣಾಗಿದ್ದರು. ಪಾಕಿಸ್ತಾನಿ ಸೇನೆಯ ಕಮಾಂಡರ್, ಲೆಫ್ಟಿನೆಂಟ್ ಜನರಲ್ ಎ.ಎ.ಕೆ. ನಿಯಾಜಿ ಅವರು ಭಾರತದ ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಜಗಜಿತ್ ಸಿಂಗ್ ಅರೋರಾ ಅವರಿಗೆ ಶರಣಾದರು. ಡಿಸೆಂಬರ್ 16 ರ ಸಂಜೆ, ಜನರಲ್ ನಿಯಾಜಿ ಶರಣಾಗತಿ ದಾಖಲೆಗಳಿಗೆ ಸಹಿ ಹಾಕಿದ್ದರು.