ನೇಣು ಬಿಗಿದ ಸ್ಥಿತಿಯಲ್ಲಿ ಚಿಲುಮೆ ಮಠದ ಸ್ವಾಮಿಜಿ ಮೃತದೇಹ ಪತ್ತೆ
ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ (52) ಮೃತದೇಹ ಪತ್ತೆಯಾಗಿದೆ. ನೇನು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಹಲವು ಅನುಮಾನಗಳನ್ನ ಹುಟ್ಟಿಹಾಕಿದೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಹಾಗೂ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








