ಹೊಸ ವರ್ಷಾಚರಣೆ, ಕ್ರಿಸ್ಮಸ್ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
ಕೊರೊನಾ ರೂಪಾಂತರ ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಸರ್ಕಾರ ಬ್ರೇಕ್ ಹಾಕಿದೆ. ಹೊಸ ವರ್ಷಾಚರಣೆ ವೇಳೆ ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಹೇಳಿಕೆ ನೀಡಿದರು.
ಕ್ರಿಸ್ಮಸ್ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಆದರೇ ಹೊಸ ವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ ಎಂದು ಸರ್ಕಾರ ಹೇಳಿದೆ.
ಡಿ 30 ರಿಂದ ಜ 2ರವರೆಗೆ ಸಾಮೂಹಿಕ ಆಚರಣೆಗೆ ಸರ್ಕಾರ ನಿರ್ಬಂಧ ವಿಧಿಸಿದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಈ ಭಾರಿ ಹೊಸ ವರ್ಷಾಚರಣೆಯ ಬ್ರೇಕ್ ಹಾಕಲಾಗಿದೆ.
ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು.
ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಉನ್ನತ ಶಿಕ್ಷಣ, ಸಚಿವರಾದ ಅಶ್ವಥ್ ನಾರಾಯಣ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಶ್ರೀ ಮಂಜುನಾಥ್ ಪ್ರಸಾದ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.








